ಬ್ರೇಕಿಂಗ್ ನ್ಯೂಸ್
11-10-24 09:43 pm Mangalore Correspondent ಕರಾವಳಿ
ಮಂಗಳೂರು, ಅ.11: ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಪರಿಚಯದ ವ್ಯಕ್ತಿ ಮೂಲಕ ನಕಲಿ ಆಧಾರ್ ಇನ್ನಿತರ ಐಡಿಗಳನ್ನು ಮಾಡಿ, ನಕಲಿ ವಿಳಾಸ ಮೂಲಕ ಭಾರತದ ಪಾಸ್ಪೋರ್ಟ್ ರೆಡಿ ಮಾಡಿಸಿದ್ದ. ಇದೀಗ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಹಾರಲು ಯತ್ನಿಸುತ್ತಿದ್ದಾಗಲೇ ಎಮಿಗ್ರೇಷನ್ ಅಧಿಕಾರಿಗಳು ಸಂಶಯದಲ್ಲಿ ತಪಾಸಣೆ ನಡೆಸಿದ್ದು ವಶಕ್ಕೆ ಪಡೆದಿದ್ದಾರೆ.
ಉಡುಪಿಯಲ್ಲಿ ಸಿದ್ಧಪಡಿಸಿದ ಪಾಸ್ಪೋರ್ಟ್ ನಲ್ಲಿ ತನ್ನ ಹೆಸರನ್ನು ಮಹಮ್ಮದ್ ಮಾಣಿಕ್ ಎಂದು ಬದಲಾಯಿಸಿದ್ದ. ಬಾಂಗ್ಲಾ ಮೂಲದ ಈ ವ್ಯಕ್ತಿಯ ಜೊತೆಗೆ ಇನ್ನೂ 5 ಮಂದಿ ಉಡುಪಿಗೆ ಬಂದಿದ್ದಾರೆ ಎನ್ನಲಾಗುತ್ತಿದ್ದು, ಆರೋಪಿಯನ್ನು ಬಜಪೆ ಪೋಲೀಸರಿಗೆ ಒಪ್ಪಿಸಲಾಗಿದೆ. ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bangladeshi illegal migrant arrested at Mangalore international. Fake ID cards and passport has been seized. The arrested has been identified as Manik Hussain.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am