ಬ್ರೇಕಿಂಗ್ ನ್ಯೂಸ್
08-08-20 11:43 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ನೆರೆ ಕಾಣಿಸಿಕೊಂಡಿದ್ದು ಹಲವಾರು ಮನೆಗಳು ಮತ್ತು ಕೃಷಿ ಭೂಮಿ ಮುಳುಗಡೆಯಾಗಿದೆ.
ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಾನ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ 30 ಮೀಟರ್ ಆಗಿದ್ದು, ಇದೀಗ ಅದಕ್ಕಿಂತಲೂ ಹೆಚ್ಚಿನ ಎತ್ತರದಲ್ಲಿ ನೀರು ಹರಿಯುತ್ತಿದೆ. ನೀರಿನ ಹೆಚ್ಚಳದಿಂದಾಗಿ ಉಪ್ಪಿನಂಗಡಿ, ನಟ್ಟಿಬೈಲು, ನೆಲ್ಯಾಡಿ ಮೊದಲಾದ ಕಡೆ ಕೃಷಿಭೂಮಿಗೆ ನೀರು ನುಗ್ಗಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇದೀಗ ನದಿ 9 ಮೀಟರ್ ಗೂ ಹೆಚ್ಚಿನ ಎತ್ತರದಲ್ಲಿ ಹರಿಯುತ್ತಿದೆ. ಇದರಿಂದಾಗಿ ಪಾಣೆಮಂಗಳೂರು, ಗೂಡಿನ ಬಳಿ ಮೊದಲಾದ ಕಡೆ ನೀರು ವಸತಿ ಪ್ರದೇಶಗಳಿಗೆ ನುಗ್ಗಿದ್ದು ಕೃತಕ ನೆರೆ ಉಂಟಾಗಿದೆ.

ಕುಮಾರಧಾರಾ ನದಿಯಲ್ಲಿ ನೀರಿನ ಹರಿವಿನಲ್ಲಿ ಕೊಂಚ ಇಳಿಮುಖವಾಗಿದ್ದರೂ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಆರನೇ ದಿನವೂ ಮುಳುಗಡೆಯಾಗಿದೆ. ಚಾರ್ಮಾಡಿ ಘಾಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವ ಹಿನ್ನಲೆಯಲ್ಲಿ ಚಾರ್ಮಾಡಿಯ ಮೃತ್ಯುಂಜಯ ಹೊಳೆಯಲ್ಲೂ ಪ್ರವಾಹದ ರೀತಿ ನೀರು ಹರಿಯಲಾರಂಭಿಸಿದೆ. ಕೊಳಂಬೆ, ಚಾರ್ಮಾಡಿ ಪ್ರದೇಶಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿವೆ. ಕೊಳಂಬೆ ಪ್ರದೇಶದಲ್ಲಿ ಸುಮಾರು 15 ಕ್ಕೂ ಮಿಕ್ಕಿದ ಮನೆಗಳು ಜಲಾವೃತಗೊಂಡಿದೆ. ಕಳೆದ ಬಾರಿ ರೌದ್ರ ನರ್ತನ ತೋರಿದ್ಧ ಮೃತ್ಯುಂಜಯ ಹೊಳೆ ಹರಿವು ಅಲ್ಲಿನ ಜನರಲ್ಲಿ ಆತಂಕ ಹುಟ್ಟಿಸಿದೆ.
Video:
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm