ಬ್ರೇಕಿಂಗ್ ನ್ಯೂಸ್
30-10-24 04:28 pm Mangalore Correspondent ಕರಾವಳಿ
ಮಂಗಳೂರು, ಅ.30: ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದ ಗೇಟ್ ಬಳಿಯಲ್ಲಿ ಇಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಜನರು ನೋಡ ನೋಡುತ್ತಲೇ ಎರಡು ವಾಹನಗಳು ಸುಟ್ಟು ಬೂದಿಯಾಗಿವೆ.
ಬುಧವಾರ ಮುಂಜಾನೆ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್ ನಲ್ಲಿ ಚಾರ್ಜ್ ಹಾಕಿದ್ದ ಒಂದು ಇಲೆಕ್ಟ್ರಿಕ್ ವಾಹನದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಇದರ ಬೆಂಕಿ ಪಕ್ಕದಲ್ಲಿದ್ದ ಮತ್ತೊಂದು ವಾಹನಕ್ಕೂ ವ್ಯಾಪಿಸಿದ್ದು ಅದನ್ನೂ ಸುಟ್ಟು ಹಾಕಿದೆ. ನಿಸರ್ಗಧಾಮದ ಒಳಗೆ ಸುತ್ತಾಡಲು 15ರಷ್ಟು ಇಲೆಕ್ಟ್ರಿಕ್ ಆಟೋ ಮಾದರಿಯ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದ್ದು ಅವುಗಳನ್ನು ರಾತ್ರಿ ವೇಳೆ ಚಾರ್ಜ್ ಹಾಕಿಡಲಾಗಿತ್ತು. ಬ್ಯಾಟರಿ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.



ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಇಲೆಕ್ಟ್ರಿಕ್ ವಾಹನಗಳಿದ್ದರೂ ಅದೃಷ್ಟವಶಾತ್ ಅವುಗಳಿಗೆ ಬೆಂಕಿ ಹತ್ತಿಕೊಂಡಿಲ್ಲ. ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಅಗ್ನಿಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಳಿಕ ಪಿಲಿಕುಳ ನಿಸರ್ಗಧಾಮದ ಸಿಬ್ಬಂದಿಗಳೇ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದರು. ಘಟನಾ ಸ್ಥಳಕ್ಕೆ ಕಾವೂರು ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Fire at Pilikula Nisargadhama; two electric buggies destroyed. An electric buggy, placed on charge at the Pilikula Nisargadhama workshop, reportedly sparked and ignited a fire early on Wednesday October 30 morning, leading to the destruction of two vehicles.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am