ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.





ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm