ಬ್ರೇಕಿಂಗ್ ನ್ಯೂಸ್
05-11-24 11:12 pm Mangaluru Correspondent ಕರಾವಳಿ
ಮಂಗಳೂರು, ನ.5: ಭಾನುವಾರ ರಾತ್ರಿ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸಾವನ್ನಪ್ಪಿದ್ದು ಸ್ನೇಹಿತರಿಬ್ಬರೂ ಜೊತೆಯಾಗಿಯೇ ಜೀವ ಕಳಕೊಳ್ಳುವಂತಾಗಿದೆ. ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು.
ರಾಷ್ಟ್ರೀಯ ಹೆದ್ದಾರಿ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಸೆಲೀನಾ ಎಂಬ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿತ್ತು. ಕಡೆಗೋಳಿ ನಿವಾಸಿ ಪ್ರವೀಣ(30) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡಿದ್ದ ಸಂದೀಪ್ (31) ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಬ್ಬರು ಕೂಡ ಸೇಲ್ಸ್ ಮ್ಯಾನ್ ವೃತ್ತಿಯಲ್ಲಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಎರಡು ದಿನಗಳ ಬಳಿಕ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಆಗಿತ್ತೆಂದು ದೂರು ಕೇಳಿಬಂದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore thumbe accident, Two killed on the spot after a bus rammed into their bike. The deceased have been identified as Sandeep and Praveen. Both were friends and worked as salesmen."
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm