ಬ್ರೇಕಿಂಗ್ ನ್ಯೂಸ್
10-11-24 07:55 pm Mangalore Correspondent ಕರಾವಳಿ
ಮಂಗಳೂರು, ನ.10: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ಅಪಘಾತದಲ್ಲಿ ಕುತ್ತಾರಿನ ರಹ್ಮತ್ ಎಂಬ ಮಹಿಳೆ ಮೃತಪಟ್ಟಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿ ಪಾಲ್ಗೊಂಡಿರುವ ಕ್ಷೇತ್ರದ ಶಾಸಕ, ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ತೀವ್ರ ನೋವು ವ್ಯಕ್ತಪಡಿಸಿ ಮೃತ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ.
ಈಗಾಗಲೇ ಪ್ರಸ್ತುತ ರಸ್ತೆ ಅಭಿವೃದ್ಧಿಗಾಗಿ ಸಭಾಧ್ಯಕ್ಷ ಯು.ಟಿ ಖಾದರ್ ಅವರು ರಾಜ್ಯ ಸರಕಾರದಿಂದ ಮೂವತ್ತು ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದ್ದು ಮಳೆಯ ಕಾರಣದಿಂದಾಗಿ ಕಾಮಗಾರಿ ಪ್ರಾರಂಭಕ್ಕೆ ವಿಳಂಬವಾಗಿತ್ತು. ಪ್ರತಿ ಮಳೆಗಾಲದ ಬಳಿಕ ರಸ್ತೆಗಳ ಗುಂಡಿಗಳನ್ನು ಸರಿಪಡಿಸುವುದು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕರ್ತವ್ಯ. ರಸ್ತೆ ಗುಂಡಿಗಳ ಬಗ್ಗೆ ಮಾಧ್ಯಮದಲ್ಲಿ ಬಂದ ವರದಿಯನ್ನು ಆಧರಿಸಿ ಈ ಘಟನೆ ಸಂಭವಿಸುವುದಕ್ಕು ಮೊದಲೇ ರಸ್ತೆ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸಭಾಧ್ಯಕ್ಷ ಯು ಟಿ ಖಾದರ್ ಸೂಚನೆ ನೀಡಿದ್ದರು.




ಇಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಂಡಿದ್ದು, ಅಪಘಾತದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಯು.ಟಿ ಖಾದರ್ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಪಘಾತ ಸಂದರ್ಭದಲ್ಲಿ ನೆರವಿಗೆ ಧಾವಿಸಿರುವ ಉಳ್ಳಾಲದ ಯುವಕರನ್ನು ಈ ಸಂದರ್ಭದಲ್ಲಿ ಯು.ಟಿ ಖಾದರ್ ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
Mangalore Thokottu accident, speaker ut Khader orders for action against highway officlas over negligence after woman was rammed by tanker while she fell off the road due to pot holes.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm