ಬ್ರೇಕಿಂಗ್ ನ್ಯೂಸ್
10-11-24 08:25 pm Mangalore Correspondent ಕರಾವಳಿ
ಮಂಗಳೂರು, ನ.10: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಬೆದರಿಸಿ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಈ ಆದೇಶ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪಿ ವಿರುದ್ಧ ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಆರೋಪಿಯನ್ನು ಆರೋಪದಿಂದ ಖುಲಾಸೆಗೊಳಿಸಿದೆ.
ನೆಲ್ಲಿಕಾರು ಗ್ರಾ.ಪಂ. ಉಪಾಧ್ಯಕ್ಷರಾದ ಶಶಿಧರ್ ಎಂ. ಎಂಬವರು 2021ರ ಜೂನ್ 23ರಂದು ತನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆಂದು ನೆಲ್ಲಿಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ನೀಡಿದ್ದರು. ಇದರಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಿದ್ದ ಪೊಲೀಸರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ದೂರುದಾರ ಮಹಿಳೆ ನೆಲ್ಲಿಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದು ಪರಿಶಿಷ್ಟ ಜಾತಿಯ ಆದಿ ದ್ರಾವಿಡ ಸಮುದಾಯಕ್ಕೆ ಸೇರಿದ್ದರು. 22-06-2021ರಂದು ಪಂಚಾಯತ್ನಲ್ಲಿ ಸಾಮಾನ್ಯ ಸಭೆ ನಡೆದ ಸಂದರ್ಭದಲ್ಲಿ ಜಾತಿ ನಿಂದನೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ದೂರುದಾರೆ ಸುಶೀಲಾ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 14 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಪ್ರಾಸಿಕ್ಯೂಷನ್ ಪರವಾಗಿ 21 ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು. ಆರೋಪಿ ಪರವಾಗಿ ಒಂದು ದಾಖಲೆಯನ್ನು ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿ ಶಶಿಧರ್ ಅವರು ಗ್ರಾಮ ಪಂಚಾಯತ್ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದನ್ನು ಸಾಕ್ಷಿಗಳು ಒಪ್ಪಿಕೊಂಡಿದ್ದಾರೆ. ಅಲ್ಲದೆ, ದೂರುದಾರರು ಸ್ವತಃ ಭ್ರಷ್ಟಾಚಾರದ ಆರೋಪಕ್ಕೆ ಒಳಗಾಗಿ, ಒಂಬುಡ್ಸ್ಮನ್ ತನಿಖೆಯಿಂದ ತಪ್ಪಿತಸ್ಥೆ ಎಂಬುದು ದೃಢವಾಗಿತ್ತು. ದೂರುದಾರೆ ಸುಶೀಲಾ ಮತ್ತು ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಸೇರಿ ನಕಲಿ ಬಿಲ್ ಸೃಷ್ಟಿಸಿ ಲಕ್ಷಗಟ್ಟಲೆ ಹಣದ ದುರುಪಯೋಗ ಮಾಡಿ ಪಂಚಾಯತ್ಗೆ ವಂಚಿಸಿರುವುದು ಸಾಬೀತಾಗಿದ್ದು, ಈ ದಾಖಲೆಯನ್ನು ಸಾಕ್ಷಿಗಳು ಒಪ್ಪಿಕೊಂಡಿದ್ದರು. ದೂರುದಾರೆ ಮತ್ತು PDO ಒಟ್ಟಾಗಿ ರೂ. 1.98 ಲಕ್ಷ ಮರು ಪಾವತಿಸಲು ಆದೇಶವಾಗಿದ್ದು, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿರುವುದಾಗಿ ಪಿಡಿಒ ಒಪ್ಪಿಕೊಂಡಿದ್ದರು.
ಆರೋಪಿ ಘಟನೆಯನ್ನು ಸ್ವತಃ ಒಪ್ಪಿಕೊಂಡಿದ್ದರೂ, ತನಗೆ ದೂರುದಾರರ ವಿರುದ್ಧ ಯಾವುದೇ ಜಾತಿ ನಿಂದನೆ ಮಾಡುವ ಉದ್ದೇಶವಿರಲಿಲ್ಲ ಎಂದು ಹೇಳಿಕೊಂಡಿದ್ದರು. ಸಾಕ್ಷಿಗಳ ಹೇಳಿಕೆ ಮತ್ತು ಸಾಕ್ಷ್ಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನ್ಯಾಯಾಲಯ, ಪ್ರಕರಣದಲ್ಲಿ ಆರೋಪಿ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಅಭಿಯೋಜನೆ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಆರೋಪಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಆರೋಪಿ ಪರವಾಗಿ ಮಂಗಳೂರಿನ ಆದಾಯ ತೆರಿಗೆ ಇಲಾಖೆಯ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಹರ್ಷ ಕುಮಾರ್ ವಾದಿಸಿದ್ದರು.
Mangalore court acquits vice president Shashidhar of Nellikar Panchyath in case of caste abuse to Sushila who is the president of the Panchyath.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm