ಬ್ರೇಕಿಂಗ್ ನ್ಯೂಸ್
11-11-24 09:05 pm Mangalore Correspondent ಕರಾವಳಿ
ಮಂಗಳೂರು, ನ.11: ನವೆಂಬರ್ 14ರಿಂದ 20ರ ವರೆಗೆ ದೇಶಾದ್ಯಂತ "ಅಖಿಲ ಭಾರತ ಸಹಕಾರ ಸಪ್ತಾಹ" ನಡೆಯುತ್ತಿದ್ದು ಇದರ ಅಂಗವಾಗಿ ನ.16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಬಾರಿ ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ವಿಷಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿದರು. ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆ ಆಯೋಜಿಸಲಾಗಿದ್ದು, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸುವರು. ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾಡಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ “ಉತ್ತಮ ಸಹಕಾರ ಸಂಘʼʼಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ 'ಶತಮಾನೋತ್ಸವ ಪೂರೈಸಿದ ಸಹಕಾರ ಸಂಘಗಳಿಗೆ ಪುರಸ್ಕಾರ' ಪ್ರದಾನ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ, ಶಾಸಕ ಜಿ.ಟಿ.ದೇವೇಗೌಡ ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ನೀಡಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಸಹಕಾರ ಸಪ್ತಾಹದ ಧ್ವಜಾರೋಹಣ ಮಾಡಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಸಹಕಾರ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆಯ ಸರಕಾರದ ಕಾರ್ಯದರ್ಶಿ ಅಜಯ್ ನಾಗಭೂಷಣ್ ಎಂ.ಎನ್., ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ.ಕುಮಾರ್., ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭಾಗವಹಿಸಲಿರುವರು. ಸಹಕಾರ ಸಪ್ತಾಹದ ಅಂಗವಾಗಿ "ಸಹಕಾರ ಜಾಥಾ" ಆಯೋಜಿಸಿದ್ದು, ಬೆಳಗ್ಗೆ 9ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಕರಾವಳಿ ಉತ್ಸವ ಮೈದಾನದ ವರೆಗೆ ಸಾಂಸ್ಕೃತಿಕ ಕಲಾಪ್ರಕಾರಗಳ ಹಾಗೂ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ 32 ವಿವಿಧ ಟ್ಯಾಬ್ಲೊಗಳೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ಡಾ.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು.
ಸಹಕಾರ ಮಾಣಿಕ್ಯ ಪ್ರಶಸ್ತಿ
ಇದಲ್ಲದೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭ "ಸಹಕಾರ ಮಾಣಿಕ್ಯ" ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಉಭಯ ಜಿಲ್ಲೆಗಳಿಂದ ತಲಾ ಒಂದರಂತೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹಾಗೂ ಕ್ರೆಡಿಟ್ ಕೋ-ಆಪರೇಟಿವ್ ಸಹಕಾರ ಸಂಘಕ್ಕೆ ಒಂದು ಪ್ರಶಸ್ತಿ ನೀಡಲಾಗುವುದು. "ಸಹಕಾರ ಮಾಣಿಕ್ಯ" ಪ್ರಶಸ್ತಿಯ ಜೊತೆಗೆ 5 ಗ್ರಾಂ ಚಿನ್ನದ ಪದಕ, ರೂ.10,000/- ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದು.
ಸಾಮಾನ್ಯ ವಿಭಾಗದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳ ಪೈಕಿ ಉಭಯ ಜಿಲ್ಲೆಗಳಲ್ಲಿ ಒಂದರಂತೆ ಹಾಗೂ ಹೈನುಗಾರಿಕೆ, ಕ್ರೆಡಿಟ್ ಸೊಸೈಟಿ, ಮೀನುಗಾರ ಸಹಕಾರ ಸಂಘ, ಸೌಹಾರ್ದ ಸಹಕಾರಿ ಸಂಘ ಹಾಗೂ ಮಹಿಳಾ ಸಹಕಾರಿ ಸಂಘಕ್ಕೆ ಉಭಯ ಜಿಲ್ಲೆಗಳಿಂದ ಒಂದು ಹಾಗೂ 2023-24ನೇ ಸಾಲಿನಲ್ಲಿ ಶತಮಾನೋತ್ಸವ ಪೂರೈಸಿದ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಗೌರವಿಸಲಾಗುವುದು. ಮೂಡುಬಿದಿರೆಯ ಸಹಕಾರ ತರಬೇತಿ ಕೇಂದ್ರದಲ್ಲಿ ಪ್ರಥಮ ಹಾಗೂ ದ್ವಿತೀಯ ರ್ಯಾಂಕ್ ವಿಜೇತರನ್ನು ಸಮಾರಂಭದಲ್ಲಿ ಪುರಸ್ಕರಿಸಲಾಗುವುದು ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.
ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ದ.ಕ. ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.
State level program to be held by DCC bank in Mangalore on November 16th. G T Gowda and many other top leaders and officials will be attending the program said DCC bank president Mr Rajendra Kumar.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm