ಬ್ರೇಕಿಂಗ್ ನ್ಯೂಸ್
11-11-24 11:03 pm Udupi Correspondent ಕರಾವಳಿ
ಉಡುಪಿ, ನ.11: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರನ್ನು ಉಡುಪಿ ಎಸ್ಪಿ ಡಾ.ಅರುಣ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ ರಾತ್ರಿ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋಹನ್ (45) ಎಂಬಾತನನ್ನು ಸ್ಥಳೀಯರು ಹಲ್ಲೆಗೈದು ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಆತನನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತಂದು ಪ್ರಕರಣ ದಾಖಲಿಸಿದ್ದರು. ಆದರೆ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಲ್ಲ ಎನ್ನಲಾಗುತ್ತಿದೆ. ಆರೋಪಿ ಬಂಧನ ವೇಳೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸಿಲ್ಲವೆಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿ ಹೆಡ್ ಕಾನ್ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ.
ಲಾಕಪ್ ಡೆತ್ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸ್ ಅಧೀಕ್ಷಕರು ಹಾಗೂ ಅವರ ತಂಡ ಸೋಮವಾರ ಉಡುಪಿಗೆ ಆಗಮಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಅದೇ ರೀತಿ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಶವಗಾರದಲ್ಲಿ ಮೃತದೇಹವನ್ನು ಪರಿಶೀಲನೆ ನಡೆಸಿ, ವೈದ್ಯಾಧಿಕಾರಿಗಳ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಬಿಜು ಮೋಹನ್ ಲಾಕಪ್ನಲ್ಲಿ ಮೃತಪಟ್ಟಿರುವ ಮಾಹಿತಿಯನ್ನು ಪೊಲೀಸರು ನ.10ರಂದು ಬೆಳಗ್ಗೆ ಕೊಲ್ಲಂನಲ್ಲಿರುವ ಆತನ ಕುಟುಂಬಸ್ಥರಿಗೆ ನೀಡಿದ್ದರು. ಅದರಂತೆ ಅಲ್ಲಿಂದ ಹೊರಟ ಕುಟುಂಬಸ್ಥರು ಬ್ರಹ್ಮಾವರ ತಲುಪಿ ಶವಾಗಾರಕ್ಕೆ ಆಗಮಿಸಿದ ಕುಟುಂಬಸ್ಥರು ಬಿಜು ಮೋನು ಅವರ ಮೃತ ದೇಹವನ್ನು ಪರಿಶೀಲಿಸಿದ್ದರು. ಬಳಿಕ ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿದ ಮೃತ ಬಿಜು ಮೋಹನ್ ಅವರ ಚಿಕ್ಕಪ್ಪನ ಮಗ ಅನೀಶ್ ಡೆನಿಲ್ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Madhu B E, police sub-inspector of Brahmavar police station, and Sujatha, head constable, have been suspended following the lockup death incident that occurred at Brahmavar station in the early hours of November 10.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am