ಬ್ರೇಕಿಂಗ್ ನ್ಯೂಸ್
12-11-24 07:00 pm Mangalore Correspondent ಕರಾವಳಿ
ಮಂಗಳೂರು, ನ.12: ಮೂಡುಶೆಡ್ಡೆ ಗ್ರಾಮ ಪಂಚಾಯತ್ ಉಪ ಚುನಾವಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನವೆಂಬರ್ 17 ಮತ್ತು 18ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವ ಮುಂದೂಡಲಾಗಿದೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿದೆ.
ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಿದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯವಾಗಿ ಧಾರ್ಮಿಕ ಮತ್ತು ಕ್ರೀಡಾ ಚಟುವಟಿಕೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಆದರೆ ರಾಜಕಾರಣಿಗಳು ಕಂಬಳದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಜಿಲ್ಲಾಡಳಿತ ಕಂಬಳವನ್ನೇ ಮುಂದೂಡಿದ್ದು ಡಿಸೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದೆ.
The Nethravathi–Phalguni Jodukare Kambala scheduled for November 17-18 at Pilikula has been postponed due to to the model code of conduct for the upcoming by-election at the Moodushedde Gram Panchayat.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm