ಬ್ರೇಕಿಂಗ್ ನ್ಯೂಸ್
16-11-24 03:54 pm Mangalore Correspondent ಕರಾವಳಿ
ಮಂಗಳೂರು, ನ.16: ಆರಗ ಜ್ಞಾನೇಂದ್ರ ನಮ್ಮ ಬಗ್ಗೆ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ನಾವೆಲ್ಲಾ ಹುಚ್ಚಾಸ್ಪತ್ರೆಯಲ್ಲಿ ಇರಬೇಕೆಂದು ಹೇಳಿದ್ದಾರೆ. ಅಂದ್ರೆ ನಮ್ಮನ್ನು ಆರಿಸಿದವರು ಜನರು. ತಮ್ಮ ಮೇಲಿರುವ ಕೋವಿಡ್ ಆರೋಪಗಳಿಗೆ ಅವರಿಗೆ ಉತ್ತರ ನೀಡೋದಕ್ಕೆ ಆಗ್ತಿಲ್ಲ. ಯಾವಾಗ ಉತ್ತರ ಕೊಡೋದಕ್ಕೆ ಆಗಲ್ಲವೋ ಆಗ ಈ ರೀತಿಯ ವ್ಯಾಕರಣ ಹೊರ ಬರುತ್ತೆ. ಆಯೋಗದ ವರದಿಯಲ್ಲಿ ಬಂದಿರುವ ಅಂಶಗಳ ಬಗ್ಗೆ ಉತ್ತರ ನೀಡಲಿ ಎಂದು ಮಾಜಿ ಗೃಹ ಸಚಿವ ಆರ್.ಜ್ಞಾನೇಂದ್ರ ಹೇಳಿಕೆಯ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಹಿಂದಿನ ಆರೋಗ್ಯ ಸಚಿವರ ಬಗ್ಗೆ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಅವರನ್ನು ಪ್ರಾಷಿಕ್ಯೂಷನ್ ಮಾಡುವ ಬಗ್ಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ಉಲ್ಲೇಖಿಸಲಾಗಿದೆ. ಇಡೀ ಕೋವಿಡ್ ಯೋಜನೆಗಳಲ್ಲಿ ಮೋಸ ಆಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಮೀರಲಾಗಿದೆ. ಇವೆಲ್ಲವೂ ವರದಿಯಲ್ಲಿ ಸ್ಪಷ್ಟವಾಗಿದೆ. ಈ ವಿಚಾರವನ್ನು ರಾಷ್ಟ್ರೀಯ ಮಟ್ಟದಲ್ಲಿ ಕೊಂಡೊಯ್ಯುವ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ.
ಕೋವಿಡ್ ಹಗರಣದ ಕುರಿತು ನ್ಯಾ.ಡಿಕುನ್ಹಾ ಪ್ರಥಮ ವರದಿ ನೀಡಿದ್ದಾರೆ. ಎರಡನೇ ಮತ್ತು ಅಂತಿಮ ವರದಿ ನೀಡಬೇಕಾಗಿದೆ. ಪ್ರಥಮ ವರದಿಯಲ್ಲಿ ಕೋವಿಡ್ ಸಂದರ್ಭದ ಅವ್ಯವಹಾರಗಳು ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಇದರಲ್ಲಿ ದಾರಿ ತಪ್ಪಿಸುವ ತಂತ್ರ ಏನಿಲ್ಲ. ನಿಯಮ ಬದ್ದವಾಗಿ ಕಾನೂನು ಪ್ರಕಾರ ತನಿಖೆ ಮುಂದುವರಿಸುತ್ತೇವೆ. ಇದರಲ್ಲಿ ರಾಜಕೀಯ ದುರುದ್ದೇಶ ಏನಿಲ್ಲ ಎಂದರು.
ಜಸ್ಟೀಸ್ ಡಿಕುನ್ಹಾ ಅತ್ಯಂತ ಪ್ರಾಮಾಣಿಕ ನ್ಯಾಯಾಧೀಶರು. ಪ್ರಹ್ಲಾದ್ ಜೋಷಿ ಹೇಳಿಕೆಗೂ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಇದರಿಂದ ಸಮಸ್ಯೆ ಆಗಿದೆ. ಜೋಷಿ ವಿರುದ್ಧ ಪ್ರಕರಣ ದಾಖಲಾದ್ರೆ ಅವರು ಜೈಲು ಸೇರುವ ಸಂದರ್ಭ ಬರಬಹುದು. ಈ ವಿಚಾರದಲ್ಲಿ ನ್ಯಾ.ಡಿಕೂನ್ಹಾ ಏನು ಮಾಡುತ್ತಾರೆಂದು ಗೊತ್ತಿಲ್ಲ. ನಾವು ಈ ಕುರಿತು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ.
ಒಬ್ಬ ಜಡ್ಜ್ ಬಗ್ಗೆ ಆ ರೀತಿ ಮಾತನಾಡುವಂತಿಲ್ಲ. ಈ ವರದಿಯಲ್ಲಿರುವುದು ನಾವು ಹುಟ್ಟು ಹಾಕಿರೋದಲ್ಲ. ನಮ್ಮ ಇಲಾಖೆಯಲ್ಲಿರುವ ಮಾಹಿತಿ ಸಂಗ್ರಹಿಸಿ ತನಿಖೆ ಮಾಡಿ ಅದರ ವರದಿ ನೀಡಿದ್ದಾರೆ. ಇದು ಐಟಿ, ಇ.ಡಿ ತರ ರಾಜಕೀಯ ಪ್ರೇರಿತ ಅಲ್ಲ. ಇ.ಡಿ, ಐ.ಟಿ ಗೆ ಖಾಲಿ ವಿರೋಧ ಪಕ್ಷ ಮಾತ್ರ ಕಾಣುತ್ತೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Araga Jnanendra has spoken about us very lightly. They have gone mad. We all have to be in a mad hospital. It was the people who chose us. They are not able to answer the Covid allegations against them. This kind of grammar comes out when it is not possible to answer. Karnataka Minister Dinesh Gundu Rao on Monday lashed out at former Home Minister R Jnanendra for his remarks that he should reply on the findings of the commission's report.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am