ಬ್ರೇಕಿಂಗ್ ನ್ಯೂಸ್
19-11-24 07:29 pm Mangalore Correspondent ಕರಾವಳಿ
ಮಂಗಳೂರು, ನ.19 : ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿದ್ದ ಭುವನೇಂದ್ರ ಪುದುವೆಟ್ಟು(44) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.
ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ಯಾಂಕ್ರಿಯಾಸಿಸ್ ಆಗಿರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರು ಕರಾವಳಿ ಅಲೆ ಮೂಲಕ ಪತ್ರಿಕಾ ವೃತ್ತಿ ಆರಂಭಿಸಿದ್ದರು. ಆನಂತರ, ವೆಬ್ದುನಿಯಾ, ಕಸ್ತೂರಿ ಚಾನೆಲ್, ಉಷಾಕಿರಣ, ವಿಜಯವಾಣಿ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.
ಒಂದು ವರ್ಷದ ಹಿಂದೆ ವಿಜಯವಾಣಿ ಪತ್ರಿಕೆ ಬಿಟ್ಟು ಊರಿನಲ್ಲಿ ಕೃಷಿ ಮಾಡುವ ಜೊತೆಗೆ ಸುದ್ದಿ ಪತ್ರಿಕೆಗೆ ವರದಿಗಾರನಾಗಿ ಕೆಲಸ ಮಾಡುತ್ತಿದ್ದರು. ಬೆಳ್ತಂಗಡಿಯಿಂದ ಸುದ್ದಿ ಬಿಡುಗಡೆ ಪತ್ರಿಕೆಗೆ ಮುಖ್ಯ ವರದಿಗಾರನಾಗಿದ್ದರು. 2024ರ ಸುದ್ದಿ ಬಿಡುಗಡೆ ದೀಪಾವಳಿ ವಿಶೇಷಾಂಕದ ನಿರ್ವಾಹಕ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಮತ್ತು ಸಹೋದರಿಯನ್ನು ಅಗಲಿದ್ದಾರೆ.
Mangalore Chief reporter of Suddi Bidugade paper Bhuvanendra Puduvettu passes away at 42. Bhuvanendra, the son of Narayana Poojary and Mohini, residents of Puduvettu in Dharmasthala village, was admitted to Alva’s Hospital, Moodbidri, two days ago due to severe abdominal pain and vomiting.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm