ಬ್ರೇಕಿಂಗ್ ನ್ಯೂಸ್
21-11-24 04:26 pm Mangalore Correspondent ಕರಾವಳಿ
ಮಂಗಳೂರು, ನ.21: ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ನಡೆಸುವುದನ್ನು ಪ್ರಶ್ನಿಸಿ ಪೇಟಾ ಸಲ್ಲಿಸಿರುವ ಅರ್ಜಿ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಾಣಿ ಸಂಗ್ರಹಾಲಯದ ಬಳಿ ಸ್ಪರ್ಧೆ ನಡೆಸುವುದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ. ಇದಕ್ಕೆ ಪರ್ಯಾಯವಾಗಿ ಬೇರೆ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲು ಆಕ್ಷೇಪವಿಲ್ಲ ಎಂದು ಪೆಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಎಜಿ ಕೆ. ಶಶಿಕಿರಣ್ ಶೆಟ್ಟಿ, ಕರಾವಳಿ ಭಾಗದಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಅರ್ಜಿದಾರರಿಗೆ ತಕರಾರಿಲ್ಲ. ಪ್ರಾಣಿ ಸಂಗ್ರಹಾಲಯದ ಬಳಿ ಕಂಬಳ ಸ್ಪರ್ಧೆ ನಡೆಸಿದರೆ ಪ್ರಾಣಿಗಳು ತೊಂದರೆ ಅನುಭವಿಸಲಿದೆ ಎನ್ನವುದು ಅರ್ಜಿದಾರರ ವಾದ. ಈ ಬಗ್ಗೆ ಪ್ರಾಣಿಗಳಿಗೆ ತೊಂದರೆಯಾಗುತ್ತಾ ಎಂದು ಕಂಡುಕೊಳ್ಳಲು ತಾಂತ್ರಿಕ ಅಧ್ಯಯನಕ್ಕಾಗಿ ನಾಲ್ವರು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾದವನ್ನು ಪ್ರತಿವಾದಿ ಮಾಡಿದ್ದು ಅವರಿಗೂ ನೋಟಿಸ್ ಜಾರಿಗೊಳಿಸಬೇಕು ಎಂದರು. ಇದರಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಪ್ರಾಧಿಕಾರಕ್ಕೆ ನೋಟಿಸ್ ಮಾಡಿದ್ದು ಡಿ.4ಕ್ಕೆ ವಿಚಾರಣೆ ಮುಂದೂಡಿದೆ.
A committee, comprising the deputy director of Sri Chamarajendra Zoological Gardens, Mysuru and three others, has been set up to examine whether there will be any adverse impact on animals in holding kambala near the Pilikula biological park in Mangaluru, the State government told the High Court of Karnataka on Wednesday.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm