ಬ್ರೇಕಿಂಗ್ ನ್ಯೂಸ್
25-11-24 10:39 pm Mangalore Correspondent ಕರಾವಳಿ
ಮಂಗಳೂರು, ನ.25: ನ್ಯಾಯಾಲಯವು ಹೊರಡಿಸಿದ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿ ನ್ಯಾಯಾಂಗ ನಿಂದನೆ ಎಸಗಿದ ಪ್ರಕರಣದಲ್ಲಿ ವಿಚಾರಣೆ ನಡೆಸಿ ತಪ್ಪಿತಸ್ಥ ವ್ಯಕ್ತಿಯ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರಿನ ನಾಲ್ಕನೇ ಜಿಲ್ಲಾ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ರಾಮಲಿಂಗಪ್ಪ ಅವರು ತಪ್ಪಿತಸ್ಥ ವ್ಯಕ್ತಿಗೆ 90 ದಿನಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಮಂಗಳೂರಿನ ವಿ.ಟಿ. ರಸ್ತೆಯ ಶ್ರೀ ವಿಠೋಬ ರುಕುಮಾಯಿ ದೇವರ ಭಂಡಾರದ ದಿನನಿತ್ಯದ ಆಡಳಿತಾತ್ಮಕ ವ್ಯವಹಾರದಲ್ಲಿ ಹಸ್ತಕ್ಷೇಪ ಉಂಟುಮಾಡಬಾರದು ಹಾಗೂ ಟ್ರಸ್ಟಿ ಎಂದು ತನ್ನನ್ನು ತಾನು ಪ್ರತಿಪಾದಿಸಬಾರದು ಎಂದು ಹನುಮಂತ ಕಾಮತ್ ಎಂಬವರ ವಿರುದ್ಧ ತಾತ್ಕಾಲಿಕ ನಿರ್ಬಂಧಕಾಜ್ಞೆ ಕೋರಿ ದೇವರ ಭಂಡಾರದ ಟ್ರಸ್ಟಿ ಎಂ. ವರದಾಯ ಪ್ರಭು ಅವರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು 2015ರಲ್ಲಿ ಹನುಮಂತ ಕಾಮತ್ ವಿರುದ್ಧ ತಾತ್ಕಾಲಿಕ ನಿರ್ಬಂಧಕಾಜ್ಞೆ ಆದೇಶ ಹೊರಡಿಸಿತ್ತು.
ಸದರಿ ಆದೇಶದ ವಿರುದ್ಧ ಹನುಮಂತ ಕಾಮತ್ ಅವರು ಸಲ್ಲಿಸಿದ ಮೇಲ್ಮನವಿ ತಿರಸ್ಕೃತವಾಗಿತ್ತು. ತದನಂತರ ಉಚ್ಚ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದರೂ ಯಾವುದೇ ತಡೆಯಾಜ್ಞೆಯನ್ನು ನೀಡಿರಲಿಲ್ಲ. ಆದರೆ ಹನುಮಂತ ಕಾಮತ್ ಅವರು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಾನೇ ಭಂಡಾರದ ಟ್ರಸ್ಟಿ ಎಂದು ಘೋಷಣೆ ಮಾಡಿಕೊಂಡು ದಿನನಿತ್ಯದ ವ್ಯವಹಾರದಲ್ಲಿ ಭಾಗವಹಿಸುತ್ತಿದ್ದರು. ಈ ನಡುವೆ, 30.03.2018 ರಂದು ತುಳುನಾಡು ಸುದ್ದಿ ಪತ್ರಿಕೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ತಾನೇ ಭಂಡಾರದ ಟ್ರಸ್ಟಿ ಎಂದು ಹನುಮಂತ ಕಾಮತ್ ಹೇಳಿಕೊಂಡಿದ್ದರು.
ಇದರ ಬೆನ್ನಲ್ಲೇ ಹನುಮಂತ ಕಾಮತ್ ಅವರು ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕ ಉಲ್ಲಂಘಿಸುತ್ತಿದ್ದಾರೆ. ಆಮೂಲಕ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುತ್ತಿದ್ದಾರೆ. ಇದು ನ್ಯಾಯಾಂಗ ನಿಂದನೆಯೆಂದು ಆರೋಪಿಸಿ ಅವರನ್ನು ಸಿವಿಲ್ ಬಂಧೀಖಾನೆಯಲ್ಲಿ ಬಂಧಿಸಿಡಬೇಕೆಂದು ಕೋರಿ ಎಂ. ವರದಾಯ ಪ್ರಭು ಅವರು ನ್ಯಾಯಾಂಗ ನಿಂದನಾ ಅರ್ಜಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಹನುಮಂತ ಕಾಮತ್ ಅವರು ಉದ್ದೇಶಪೂರ್ವಕ ತಾತ್ಕಾಲಿಕ ನಿರ್ಬಂಧಕಾಜ್ಞೆ ಆದೇಶವನ್ನು ಉಲ್ಲಂಘನೆ ಮಾಡಿರುತ್ತಾರೆ ಎಂಬ ತೀರ್ಮಾನಕ್ಕೆ ಬಂದು ಅವರನ್ನು ತಪ್ಪಿತಸ್ಥರೆಂದು ನಿರ್ಣಯಿಸಿದೆ. ಹೀಗಾಗಿ ಹನುಮಂತ ಕಾಮತ್ ಅವರು 90 ದಿನಗಳ ವರೆಗೆ ಸಿವಿಲ್ ಬಂಧೀಖಾನೆಗೆ ಒಳಪಡಬೇಕೆಂದು ನ. 23ರಂದು ಆದೇಶ ಹೊರಡಿಸಿದೆ.
ಸಾಮಾನ್ಯವಾಗಿ ಒಬ್ಬ ವ್ಯಕ್ತಿಯು ಪರಿಹಾರದ ಎಲ್ಲಾ ಬಾಗಿಲು ಮುಚ್ಚಿದ ನಂತರ ಅಂತಿಮವಾಗಿ ನ್ಯಾಯಾಲಯದ ಮುಂದೆ ತನ್ನ ಅಹವಾಲನ್ನು ಹೇಳಿಕೊಂಡು ಬರುತ್ತಾರೆ. ನ್ಯಾಯಾಲಯವು ಅಂತಹ ವ್ಯಕ್ತಿಯ ಅಹವಾಲನ್ನು ಆಲಿಸಿ ಒಂದು ನಿರ್ದಿಷ್ಟವಾದ ಆದೇಶವನ್ನು ಹೊರಡಿಸಿದಾಗ ಅಂತಹ ಆದೇಶವನ್ನು ಪಾಲಿಸುವ ಬದ್ಧತೆ ಸದರಿ ಆದೇಶ ಯಾವ ವ್ಯಕ್ತಿಯ ವಿರುದ್ಧ ಹೊರಡಿಸಲಾಗಿದೆಯೋ ಆ ವ್ಯಕ್ತಿಗೆ ಇರುತ್ತದೆ. ಆದರೆ ತನ್ನ ವಿರುದ್ಧ ನ್ಯಾಯಾಲಯ ಹೊರಡಿಸಿದ ಆದೇಶವನ್ನು ಉಲ್ಲಂಘಿಸಿ ಪುನಃ ಅದೇ ರೀತಿಯ ನಡವಳಿಕೆಯಿಂದ ನಡೆದುಕೊಂಡರೆ ನ್ಯಾಯಾಲಯದ ಆದೇಶಕ್ಕೆ ಯಾವುದೇ ಬೆಲೆ ಇಲ್ಲದಂತಾಗುತ್ತದೆ. ಆದುದರಿಂದ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ತೋಳ್ಬಲವನ್ನು ಹೊಂದಿರುವ ವ್ಯಕ್ತಿಗಳಿಗೆ ಸಮಾಜವನ್ನು ನಿಯಂತ್ರಿಸುವ ಸಂದರ್ಭ ಸೃಷ್ಟಿಯಾಗುತ್ತದೆ. ಅಂತಹ ಕೃತ್ಯಕ್ಕೆ ಕಡಿವಾಣ ಹಾಕದೆ ಇದ್ದಲ್ಲಿ ಸಮಾಜದಲ್ಲಿ ಇರುವಂತಹ ಕಾನೂನಿನ ವ್ಯವಸ್ಥೆ ಮತ್ತು ನೀತಿ ನಿಯಮಗಳನ್ನು ಗಾಳಿಗೆ ತೂರಿದ ವ್ಯಕ್ತಿಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಹನುಮಂತ ಕಾಮತ್ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿರುವ ಕಾರಣಕ್ಕೆ ಶಿಕ್ಷೆಗೆ ಅರ್ಹರಾಗಿದ್ದಾರೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ. ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ಪಿ. ರಂಜನ್ ರಾವ್ ವಾದಿಸಿದರು.
Vithoba Rukumai temple case, Mangalore Civil Court orders 90 days jail for violating court order.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm