ಬ್ರೇಕಿಂಗ್ ನ್ಯೂಸ್
27-11-24 08:16 pm Mangalore Correspondent ಕರಾವಳಿ
ಮಂಗಳೂರು, ನ.27: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಡಿಸೆಂಬರ್ 2 ಮತ್ತು 3ರಂದು ಮಂಗಳೂರಿನಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಲಿದ್ದಾರೆ. ಡಿ.2ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತಿಯ ಆಗಬೇಕಾದ ಕೆಲಸದಲ್ಲಿ ವಿಳಂಬ ಆಗಿದ್ದರೆ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಉಪ ಲೋಕಾಯುಕ್ತರಿಗೆ ಸಲ್ಲಿಸಬಹುದು.
ಡಿಸೆಂಬರ್ 3ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 4:30ರ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ಈಗಾಗಲೇ ದಾಖಲಾಗಿರುವ, ತನಿಖೆ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುತ್ತದೆ. ಜಿಲ್ಲೆಯ ಸಾರ್ವಜನಿಕರು ಅಂದು ನೇರವಾಗಿ ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಆಗಮಿಸಿ ಉಪಲೋಕಾಯುಕ್ತರಿಗೆ ತಮ್ಮ ಅಹವಾಲು ಸಲ್ಲಿಸಬಹುದು. ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿರುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
ದ.ಕ. ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಡಿಸೆಂಬರ್ 7 ರಂದು ಬೆಳಗ್ಗೆ 10.30ಕ್ಕೆ ಜಂಟಿ ಕೃಷಿ ನಿರ್ದೇಶಕರ ಕಛೇರಿ ಆವರಣ, ಲೋಕೋಪಯೋಗಿ ಕಟ್ಟಡ ಸಂಕೀರ್ಣ, ನೆಹರೂ ಮೈದಾನ ರಸ್ತೆ, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಅದಕ್ಕೆ ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 5 ರೊಳಗೆ ಕಚೇರಿಯ ಇಮೇಲ್ ಅಥವಾ ಖುದ್ದಾಗಿ/ಪೋಸ್ಟ್ ಮೂಲಕ ದಕ್ಷಿಣ ಕನ್ನಡ ಜಂಟಿ ಕೃಷಿ ನಿರ್ದೇಶಕರ ಕಚೇರಿ ವಿಳಾಸಕ್ಕೆ ಕಳುಹಿಸಬಹುದು.
ಡಿಸೆಂಬರ್ 5ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಸಸ್ಯಹಾರ ತಿನಿಸುಗಳಿಗೆ ಮಾತ್ರ ಅವಕಾಶವಿದ್ದು, ಪ್ರತಿ ಸ್ಪರ್ಧಿಗೆ ಸಿರಿಧಾನ್ಯದ ಒಂದೇ ತಿನಿಸು (ಅಡುಗೆ)ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಹಾಗೂ ಒಂದು ಮರೆತು ಹೋದ ಖಾದ್ಯವನ್ನು ಮಾಡಿ ಸ್ಪರ್ಧೆಯಲ್ಲಿ ಪ್ರದರ್ಶಿಸಲು ಅವಕಾಶವಿರುತ್ತದೆ.
ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಮತ್ತು ಒಂದು ಮರತು ಹೋದ ಖಾದ್ಯ ಪಾಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರು ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಮತ್ತು ಮರತು ಹೋದ ಖಾದ್ಯ ಪಾಕ ಸ್ಪರ್ಧೆಯಲ್ಲಿ ಸ್ವತಃ ತಿನಿಸನ್ನು ಅವಶ್ಯವಿರುವ ಸಾಮಾಗ್ರಿಗಳೊಂದಿಗೆ ತಯಾರಿಸಲು ಸಿದ್ದರಿರಬೇಕಾಗುತ್ತದೆ.
ಆಯಾ ವಿಭಾಗಗಳಲ್ಲಿ ಪ್ರಥಮ - ರೂ.5000, ದ್ವಿತೀಯ - ರೂ.3000, ತೃತೀಯ - ರೂ.2000 ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ದೂ.ಸಂಖ್ಯೆ: 0824-2423604/ 8884002801 ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Delay in government work, demand for bribe, open complaint accepted by lokayukta on Dec 2 and 3.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm