ಬ್ರೇಕಿಂಗ್ ನ್ಯೂಸ್
28-11-24 06:05 pm Mangalore Correspondent ಕರಾವಳಿ
ಮಂಗಳೂರು, ನ.28: ರಸ್ತೆ ದುರಸ್ತಿಗಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಪೊಲೀಸರು ಎಫ್ಐಆರ್ ದಾಖಲಿಸಿದ ಕುರಿತಾಗಿ ಎದ್ದ ಆಕ್ರೋಶ ಪೊಲೀಸ್ ಕಮಿಷನರ್ ವಿರುದ್ಧ ತಿರುಗಿದೆ. ಇದೀಗ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ವರ್ಗಾಯಿಸಬೇಕೆಂದು ಡಿವೈಎಫ್ಐ ಕಾರ್ಯಕರ್ತರು ನಗರದ ರಾವ್ ಅಂಡ್ ರಾವ್ ವೃತ್ತದಲ್ಲಿ ರಸ್ತೆ ತಡೆ ನಡೆಸಿದ್ದಾರೆ.
ಆದರೆ ಅಲ್ಲಿ ಸೇರಿದ್ದ ಕಾರ್ಯಕರ್ತರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಜಮಾವಣೆಗೊಂಡಿದ್ದರು. ಪೊಲೀಸ್ ಕಮಿಷನರ್ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆ ಮಾಡಲು ಮುಂದಾಗುತ್ತಿದ್ದಂತೆ ಪೊಲೀಸರು ಮುತ್ತಿಗೆ ಹಾಕಿದ್ದಾರೆ. ರಸ್ತೆಯಲ್ಲಿ ಕುಳಿತ ಕಾರ್ಯಕರ್ತರನ್ನು ಹಿಡಿದು ಒಬ್ಬೊಬ್ಬರನ್ನೇ ವಶಕ್ಕೆ ಪಡೆದು ಪೊಲೀಸ್ ಬಸ್ಸಿಗೆ ತುಂಬಿಸಿದ್ದಾರೆ.
ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಜ್ ನೇತೃತ್ವದಲ್ಲಿ ಮಹಿಳೆಯರನ್ನು ಒಳಗೊಂಡಿದ್ದ 40ಕ್ಕೂ ಮಿಕ್ಕಿ ಕಾರ್ಯಕರ್ತರು ಸೇರಿದ್ದರು. ಪೊಲೀಸರು ಬಲವಂತವಾಗಿ ರಸ್ತೆಯಿಂದ ಎಬ್ಬಿಸಿ ಬಸ್ಸಿಗೆ ತುಂಬಿಸಿದ್ದಾರೆ. ಈ ವೇಳೆ, ಪೊಲೀಸ್ ಕಮಿಷನರ್ ಮತ್ತು ಸ್ಪೀಕರ್ ಯುಟಿ ಖಾದರ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಆನಂತರ, ಅವರನ್ನೆಲ್ಲ ವಶಕ್ಕೆ ಪಡೆದು ಪಾಂಡೇಶ್ವರ ಠಾಣೆಗೆ ಒಯ್ದಿದ್ದಾರೆ. ಕಾರ್ಯಕರ್ತರ ನಡುವೆ ತಳ್ಳಾಟ ಸಂದರ್ಭದಲ್ಲಿ ಕದ್ರಿ ಠಾಣೆ ಎಎಸ್ಐ ಮುತ್ತಪ್ಪ ಅಸ್ವಸ್ಥರಾಗಿದ್ದು ನೆಲಕ್ಕೆ ಬಿದ್ದಿದ್ದು ಅವರನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದ ಪ್ರಸಂಗವೂ ನಡೆಯಿತು.
ಎರಡು ದಿನಗಳ ಹಿಂದೆ ಕುಳೂರು ಸೇತುವೆಯ ಬಳಿ ನಂತೂರು - ಸುರತ್ಕಲ್ ಹೆದ್ದಾರಿ ದುರಸ್ತಿ ಮಾಡಬೇಕೆಂದು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆದಿತ್ತು. ಪೊಲೀಸ್ ಅನುಮತಿ ಇಲ್ಲದೆಯೂ ಪ್ರತಿಭಟನೆ ನಡೆಸಿದ್ದಾರೆಂದು ಕಾವೂರು ಠಾಣೆಯಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. 15 ದಿನದಲ್ಲಿ ಎರಡನೇ ಎಫ್ಐಆರ್ ದಾಖಲಿಸಿದ್ದನ್ನು ವಿರೋಧಿಸಿ, ಪೊಲೀಸ್ ಕಮಿಷನರ್ ವರ್ಗಾವಣೆ ಆಗ್ರಹಿಸಿ ಇದೀಗ ಮಂಗಳೂರು ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ.
Mangalore Police commissioner Anupam Agarwal corruption, DYFI protest, members taken into custody. Members of the Democratic Youth Federation of India (DYFI) staged a road block protest at Rao and Rao Circle on Thursday, November 28 demanding the resignation of police commissioner Anupam Agrawal.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm