ಬ್ರೇಕಿಂಗ್ ನ್ಯೂಸ್
03-12-24 06:18 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಲಾಗಿದೆ. ನ.30ರಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜ್ಪೆ ಠಾಣೆಗೆ ಸಿಐಎಸ್ಎಫ್ ಸಿಬಂದಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್ ಎಲ್ ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಬೇಡಿಕೆ ಮುಂದಿಡಲಾಗಿದೆ.
ರಾಮೇಶ್ವರ ಕೆಫೆ ಬ್ಲಾಸ್ಟ್ ಅನ್ನು ಪಾಕ್ ಐಎಸ್ಐ ನವರು ತಮಿಳುನಾಡು ಡಿಜಿಪಿಯ ಪುತ್ರಿ ದೌಡಿ ಜೀವಾಲ್ ಎಂಬವರನ್ನು ಬಳಸಿಕೊಂಡು ಮಾಡಿದ್ದಾರೆ. ಜಮೇಶಾ ಮುಬೀನ್ ಎಂಬಾತ ಇದಕ್ಕೆ ಸಹಕಾರ ನೀಡಿದ್ದಾನೆ ಎಂದು ಇಮೇಲ್ ಸಂದೇಶದಲ್ಲಿ ಬರೆದಿರುವುದಲ್ಲದೆ, ವಿ.ಬಾಲಕೃಷ್ಣನ್ ಐಪಿಎಸ್, ಎಡ್ವಕೇಟ್ ಶ್ವೇತಾ, ವರುಣ್ ಐಪಿಎಸ್ ಎಂಬ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದಲ್ಲದೆ, ರಾಮೇಶ್ವರ ಕೆಫೆ ಪ್ರಕರಣವನ್ನು ಐಎಸ್ಐನವರು ಮಾತ್ರ ಮಾಡಿದ್ದಾಗಿ ಬಿಂಬಿಸಲಾಗಿದೆ.. ಹೀಗೆ ಹಲವು ವಿಚಾರಗಳನ್ನು ಅರೆಬರೆ ಇಂಗ್ಲಿಷ್ ನಲ್ಲಿರುವ ಬೆದರಿಕೆ ಸಂದೇಶದಲ್ಲಿ ಬರೆಯಲಾಗಿದೆ.
ಇದೇ ರೀತಿಯ ಬೆದರಿಕೆ ಸಂದೇಶ ಕಳೆದ ಅಕ್ಟೋಬರ್ 25ರಂದು ತಿರುಪತಿಯ ಎರಡು ಹೆಸರಾಂತ ಹೊಟೇಲ್ ಗಳಿಗೆ ಬಂದಿತ್ತು. ಅದರಲ್ಲಿಯೂ ಜಾಫರ್ ಸಾದಿಕ್ ಮತ್ತು ಕೃತಿಕಾ ಉದಯನಿಧಿ ಹೆಸರು ಉಲ್ಲೇಖ ಆಗಿತ್ತು. ಮಂಗಳೂರು ಏರ್ಪೋರ್ಟಿಗೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಈ ಕೃತ್ಯದಲ್ಲಿ ಅಲ್ಲಿನವರೇ ಇರುವ ಸಾಧ್ಯತೆಯಿದೆ.
A bomb threat was issued to Mangalore International Airport via email, and a case has been registered at Bajpe Police Station. An email was sent to the CISF from [email protected]. Bajpe police are now investigating the case.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm