ಬ್ರೇಕಿಂಗ್ ನ್ಯೂಸ್
16-12-24 06:25 pm Mangalore Correspondent ಕರಾವಳಿ
ಮಂಗಳೂರು, ಡಿ.16: 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಾನೂನು ಉಲ್ಲಂಘಿಸಿ ಮದುವೆ ಮಾಡಿದ್ದಕ್ಕಾಗಿ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಮತ್ತು ಗಂಡನ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಕ್ಸೋ ನ್ಯಾಯಾಲಯ ಆರೋಪಿತರಿಗೆ ಒಂದು ವರ್ಷ ಕಾಲ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್ (29), ಆತನ ತಂದೆ ಕೆ.ಐ ಮೊಹಮ್ಮದ್, ತಾಯಿ ಮೈಮೂನಾ, ಹುಡುಗಿ ತಂದೆ ಫರಂಗಿಪೇಟೆ ನಿವಾಸಿ ಅಬ್ದುಲ್ ಖಾದರ್ ಮತ್ತು ತಾಯಿ ರಮ್ಲತ್ ಒಂದು ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ. 2023ರ ಮೇ 31ರಂದು ಮೊಂಟೆಪದವು ಗ್ರಾಮದ ಮದುವೆ ಗಂಡಿನ ಮನೆಯಲ್ಲಿ ಮಹಮ್ಮದ್ ಇಂತಿಯಾಜ್ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಸಿದ್ದರು. ಹುಡುಗನ ತಂದೆ, ತಾಯಿ ಮತ್ತು ಹುಡುಗಿಯ ತಂದೆ, ತಾಯಿ ಸಮ್ಮುಖದಲ್ಲಿಯೇ ಮದುವೆ ನಡೆದಿತ್ತು.
ಆದರೆ ವಧುವಿಗೆ ಪ್ರಾಯ ಪೂರ್ತಿಯಾಗಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದರಂತೆ, ಮರುದಿನ ಜೂನ್ 1ರಂದು ತನಿಖೆ ನಡೆಸಿದ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವರ ಮತ್ತು ವಧುವಿನ ತಂದೆ, ತಾಯಿ ಹಾಗೂ ಮದುವೆ ಗಂಡು ವಿರುದ್ಧ ಕೇಸು ದಾಖಲಿಸಿದ್ದರು. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರಾಜೇಂದ್ರ ಬಿ. ಅವರು ತನಿಖೆ ಪೂರ್ತಿಗೊಳಿಸಿ ಪೋಕ್ಸೋ ಕಾಯ್ದೆಯ ಕಲಂ 6 ಮತ್ತು ಬಾಲ್ಯ ವಿವಾಹ ಕಾಯ್ದೆ ಕಲಂ 9, 10, 11ರಂದು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ಕೋರ್ಟಿನಲ್ಲಿ 10 ಸಾಕ್ಷಿದಾರರು ಮತ್ತು 22 ದಾಖಲೆಗಳನ್ನು ಪರಿಶೀಲಿಸಿ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶ ಮಾನು ಕೆ.ಎಸ್ ತೀರ್ಪು ನೀಡಿದ್ದಾರೆ.
ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಕಲಂ 10 ಮತ್ತು 11ರಡಿಯಲ್ಲಿ ಒಂದು ವರ್ಷ ಕಾಲ ಆರೋಪಿತರಿಗೆ ತಲಾ ಒಂದು ವರ್ಷ ಕಾಲ ಶಿಕ್ಷೆ ಮತ್ತು ತಲಾ 5 ಸಾವಿರ ದಂಡ ವಿಧಿಸಲಾಗಿದೆ. ಸಂತ್ರಸ್ತೆ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬದರಿನಾಥ ನಾಯರಿ ವಾದಿಸಿದ್ದರು. ಕೇಸು ದಾಖಲಾದ ಒಂದೂವರೆ ವರ್ಷದಲ್ಲಿ ಶಿಕ್ಷೆಯಾಗಿರುವುದು ವಿಶೇಷ.
The Additional District and Sessions Court - FTSC-II (Pocso) Judge Maanu K S has convicted five persons to one-year rigorous imprisonment and slapped a total fine of Rs 35,000, in a child marriage case under the Prohibition of Child Marriage Act
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am