ಬ್ರೇಕಿಂಗ್ ನ್ಯೂಸ್
20-12-24 04:40 pm Mangalore Correspondent ಕರಾವಳಿ
ಮಂಗಳೂರು, ಡಿ.20: ಕೇಂದ್ರ ಸಚಿವ ಅಮಿತ್ ಷಾ ಮತ್ತು ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಗುಜರಾತಿನ ಗೂಂಡಾ ಅಮಿತ್ ಷಾ, ಕೊಲೆಗಡುಕ, ಕುಡುಕ ಸಿಟಿ ರವಿ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಮಿನಿ ವಿಧಾನಸೌಧ ಬಳಿ ಪ್ರತಿಭಟನೆ ನಡೆಸಿ ಬಳಿಕ ಏಕಾಏಕಿ ರಸ್ತೆಗೆ ಬಂದು ಪ್ರತಿಭಟನೆ ನಡೆಸಿದರು. ಈ ವೇಳೆ, ಪೊಲೀಸರು ಬಂದು ರಸ್ತೆ ತಡೆ ಮಾಡದಂತೆ ತಡೆದು ಕಾರ್ಯಕರ್ತರನ್ನು ಬದಿಗೆ ಸರಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಅಮಿತ್ ಷಾ ಒಬ್ಬ ಕ್ರಿಮಿನಲ್ ಆಗಿದ್ದು ಗುಜರಾತಿನಿಂದ ಗಡೀಪಾರು ಮಾಡಲಾಗಿತ್ತು. ಅಂಥ ಕ್ರಿಮಿನಲ್ ಈಗ ಗೃಹ ಸಚಿವರಾಗಿದ್ದು ಈಗ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಇಂಥವರು ಕೇಂದ್ರ ಸಚಿವರಾಗಿ ಮುಂದುವರಿಯಬಾರದು. ಅವರನ್ನು ಸಂಪುಟದಿಂದಲೇ ಕಿತ್ತು ಹಾಕಬೇಕು ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಮಾತನಾಡಿ, ಸಿಟಿ ರವಿ ಒಬ್ಬ ಕೊಲೆಗಾರ, ಕುಡುಕ ವ್ಯಕ್ತಿ. ಆತನನ್ನು ಅದೇ ರೀತಿ ಕರೆದರೆ ಈ ವ್ಯಕ್ತಿ ಮಾತ್ರ ಮಹಿಳೆಯೆಂದೂ ನೋಡದೆ ಅಶ್ಲೀಲವಾಗಿ ಮಾತನಾಡಿದ್ದಾನೆ. ಇಂಥವರು ಶಾಸಕರಾಗಿ ಇರುವುದಕ್ಕೆ ನಾಲಾಯಕ್. ಪರಿಷತ್ ಸ್ಥಾನದಿಂದ ಅನರ್ಹ ಮಾಡಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಪ್ರಕಾಶ್ ಸಾಲ್ಯಾನ್, ಪುರುಷೋತ್ತಮ ಚಿತ್ರಾಪುರ, ಮುಖಂಡರಾದ ಸುರೇಶ್ ಬಳ್ಳಾಲ್, ಕೆ.ಹರಿನಾಥ್, ಸದಾಶಿವ್ ಉಳ್ಳಾಲ್, ಅಬ್ದುಲ್ ರವೂಫ್, ಕೆ.ಪಿ.ಥೋಮಸ್, ಭರತ್ ಮುಂಡೋಡಿ, ಕೆ.ಅಶ್ರಫ್, ಪದ್ಮನಾಭ ಅಮೀನ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಅಬ್ಬಾಸ್ ಅಲಿ, ಟಿ.ಹೊನ್ನಯ್ಯ, ನೀರಜ್ ಚಂದ್ರ ಪಾಲ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ, ಸಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ಎ.ಸಿ.ವಿನಯರಾಜ್, ಸತೀಶ್ ಪೆಂಗಲ್, ಚೇತನ್ ಬೆಂಗ್ರೆ, ಕೆ.ಅಪ್ಪಿ, ಮ.ನ.ಪಾ ವಿಪಕ್ಷ ನಾಯಕ ಅನಿಲ್ ಕುಮಾರ್, ಗಿರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Chikkamagaluru (Karnataka): BJP supporters and local leaders were taken into preventive custody for obstruction of traffic at Hanumathappa Circle here on Friday as they staged a protest here condemning the arrest of senior party leader leader C T Ravi.
22-08-25 12:29 pm
HK News Desk
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
22-08-25 01:11 pm
HK News Desk
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm