ಬ್ರೇಕಿಂಗ್ ನ್ಯೂಸ್
25-12-24 05:24 pm Mangalore Correspondent ಕರಾವಳಿ
ಮಂಗಳೂರು, ಡಿ.25: ಕೊಂಕಣ ರೈಲ್ವೇಯನ್ನು ಯಾವುದೇ ಷರತ್ತಿಲ್ಲದೆ ರಾಜ್ಯ ಸರಕಾರ ಬಿಟ್ಟುಕೊಟ್ಟರೆ ಭಾರತೀಯ ರೈಲ್ವೇ ಜೊತೆಗೆ ವಿಲೀನಕ್ಕೆ ಸಿದ್ಧ ಎಂದು ರೈಲ್ವೇ ಸಚಿವರು ಭರವಸೆ ನೀಡಿದ್ದಾರೆ. ಈಗಾಗಲೇ ಸಾಲದಲ್ಲಿ ಮುಳುಗಿರುವ ಕೊಂಕಣ ರೈಲ್ವೇಯನ್ನು ಕೇಂದ್ರ ರೈಲ್ವೇ ಇಲಾಖೆ ಜೊತೆಗೆ ವಿಲೀನಗೊಳಿಸಿದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಇಂಡಿಯನ್ ರೈಲ್ವೇ ಶೇ.51 ಮತ್ತು ರಾಜ್ಯ ಸರಕಾರ ಶೇ. 49 ಷೇರು ಬಂಡವಾಳದೊಂದಿಗೆ ಕೊಂಕಣ ರೈಲ್ವೇ ಆರಂಭಗೊಂಡಿತ್ತು. ರಾಜ್ಯ ಸರಕಾರ ಷೇರುಗಳನ್ನು ಬಿಟ್ಟುಕೊಟ್ಟರೆ ಭಾರತೀಯ ರೈಲ್ವೇ ಜೊತೆಗೆ ವಿಲೀನಕ್ಕೆ ಕೇಂದ್ರ ಸರಕಾರ ಸಿದ್ಧವಿದೆ ಸಂಸತ್ತಿನಲ್ಲಿ ರೈಲ್ವೇ ಸಚಿವರು ಉತ್ತರ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರಕಾರ ಷೇರಿನ ಪೂರಕ ಹಣವನ್ನು ನೀಡಿದರೆ ಕೇಂದ್ರಕ್ಕೆ ಬಿಟ್ಟುಕೊಡುವುದಾಗಿ ಹೇಳಿದೆ. ಈ ಯೋಜನೆಯಾಗಿ 25 ವರ್ಷ ಪೂರ್ಣಗೊಂಡಿದ್ದು ರಾಜ್ಯಕ್ಕೆ ಅನುಕೂಲವಾಗಿದೆ. ಆದರೆ, ಕೊಂಕಣ ರೈಲ್ವೇ ನಿಗಮ ಭಾರೀ ನಷ್ಟದಲ್ಲಿದ್ದು ರಾಜ್ಯ ಸರಕಾರ ತನ್ನ ಷೇರು ಬಿಟ್ಟುಕೊಟ್ಟು ವಿಲೀನಕ್ಕೆ ಸಹಕರಿಸಬೇಕು ಎಂದು ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕುರಿತಾಗಿ 19 ಪ್ರಶ್ನೆಗಳನ್ನು ಕೇಳಿದ್ದು, ಉತ್ತರ ಪಡೆದಿದ್ದೇನೆ. ಮುಂದೆ ಪ್ರತಿ ಬಾರಿ ಅಧಿವೇಶನ ಆದಾಗಲೂ ನಾನೇನು ಮಾಡಿದ್ದೇನೆ ಎಂಬುದನ್ನು ಜನರಿಗೆ ತಿಳಿಸಲು ಸಂವಾದ ಏರ್ಪಡಿಸುತ್ತೇನೆ ಎಂದು ಹೇಳಿದ ಚೌಟ, ಮಂಗಳೂರು- ಬೆಂಗಳೂರು ನಡುವಿನ ಬಿಸಿ ರೋಡ್ – ಗುಂಡ್ಯ ಚತುಷ್ಪಥ ಹೆದ್ದಾರಿ ಕಾಮಗಾರಿ 2025ರ ಜೂನ್ ನಲ್ಲಿ ಪೂರ್ಣಗೊಳಿಸುವುದಾಗಿ ಕೇಂದ್ರ ಸಾರಿಗೆ ಸಚಿವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಎಂದರು.
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ಧಿ ಕುರಿತು ಪ್ರಶ್ನೆ ಕೇಳಿದ್ದು, ಈ ನಿಟ್ಟಿನಲ್ಲಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸಚಿವರು ಸೂಚಿಸಿದ್ದಾರೆ. ಸಾಧ್ಯತಾ ವರದಿ ಆಧರಿಸಿ ಯೋಜನೆ ಅನುಷ್ಠಾನ ಆಗಲಿದೆ. ಪಶ್ಚಿಮ ಘಟ್ಟದಲ್ಲಿ ಇನ್ನೊಂದು ಹೆದ್ದಾರಿ ನಿರ್ಮಾಣಕ್ಕೆ ರಾಜ್ಯದ ಒಪ್ಪಿಗೆ ದೊರೆತರೆ ಮುಂದಿನ ಪ್ರಕ್ರಿಯೆ ನಡೆಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಮಂಗಳೂರಿನಲ್ಲಿ ಕೋಸ್ಟ್ ಗಾರ್ಡ್ ಅಕಾಡೆಮಿ, ಪ್ರೀಮಿಯರ್ ಬ್ಯಾಂಕಿಂಗ್ ಸಂಸ್ಥೆ, ಅಡಕೆ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ಕುರಿತಂತೆ ಸರಕಾರಿ- ಖಾಸಗಿ ಜಂಟಿ ಅಧ್ಯಯನ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವರ ಜೊತೆಗೆ ಮಾತುಕತೆ ನಡೆಸಲಾಗಿದೆ. ಅಡಕೆ ರೋಗ ಬಾಧಿತ ಪ್ರದೇಶದಲ್ಲಿ ಪರ್ಯಾಯ ಬೆಳೆಯಾಗಿ ಕಾಫಿ ಬೆಳೆಯಬಹುದು ಎಂದು ಅಧ್ಯಯನ ವರದಿ ಬಂದಿದೆ ಎಂದು ಹೇಳಿದರು.
ಮಂಗಳೂರು- ಬೆಂಗಳೂರು ಮಧ್ಯೆ ಹೈಟೆಕ್ ರೈಲ್ವೇ ಲೈನ್ ಕುರಿತು ಕೇಳಿದ ಪ್ರಶ್ನೆಗೆ, ಕೇಂದ್ರ ಸರಕಾರ ಇದರ ಅಗತ್ಯದ ಬಗ್ಗೆ ಒಪ್ಪಿಕೊಂಡಿದೆ. ಸುಬ್ರಹ್ಮಣ್ಯ- ಸಕಲೇಶಪುರ ನಡುವೆ ರೈಲ್ವೇ ಲೈನ್ ಇಲೆಕ್ಟ್ರಿಫಿಕೇಶನ್ ಕೆಲಸ ಮುಂದಿನ ಜೂನ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಮಂಗಳೂರು ಜಂಕ್ಷನ್ ಮತ್ತು ಸೆಂಟ್ರಲ್ ರೈಲ್ವೇ ಸ್ಟೇಶನ್ ಸೇರಿದಂತೆ ಕರ್ನಾಟಕ ಭಾಗದ 36 ಕಿಮೀ ಹಳಿಯನ್ನು ನೈರುತ್ಯ ರೈಲ್ವೇಯಲ್ಲಿ ವಿಲೀನಗೊಳಿಸುವ ಉದ್ದೇಶದಿಂದ ಕೇಂದ್ರ ರೈಲ್ವೇ ಸಚಿವರ ಜೊತೆ ಮಾತುಕತೆ ನಡೆಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಚೌಟ ಹೇಳಿದರು.
Dakshina Kannada Member of Parliament Capt. Brijesh Chowta on Tuesday urged the Karnataka government to relinquish its share with the Konkan Railway Corporation Ltd. (KRCL) in favour of the Indian Railways (IR) to pave way for merging KRCL with the IR.
22-08-25 12:29 pm
HK News Desk
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
22-08-25 02:00 pm
HK News Desk
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm