ಬ್ರೇಕಿಂಗ್ ನ್ಯೂಸ್
27-12-24 09:26 pm Mangalore Correspondent ಕರಾವಳಿ
ಮಂಗಳೂರು, ಡಿ.27: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕ್ರೈಸ್ತ ಸಮುದಾಯದ 155 ಮಂದಿ ತಮ್ಮ ಹೆಸರು, ಮೊಬೈಲ್ ಸಂಖ್ಯೆ ಮತ್ತು ಸಹಿಯನ್ನು ಹಾಕಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಮನವಿ ನೀಡಿದ್ದಾರೆ. ಅನಿಲ್ ಲೋಬೊ ಹಲವರಿಗೆ ಅನ್ಯಾಯ ಮಾಡಿದ್ದಾರೆ. ಮುಗ್ಧ ಮನೋಹರ್ ಪಿರೇರಾ ಸಾವಿಗೆ ನ್ಯಾಯ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದು ಇದರ ಪ್ರತಿಯನ್ನು ಮುಖ್ಯಮಂತ್ರಿ, ಗೃಹ ಸಚಿವರು, ಸಹಕಾರಿ ಸಚಿವರು, ಜಿಲ್ಲಾಧಿಕಾರಿ ಮತ್ತು ಸ್ಪೀಕರ್ ಯುಟಿ ಖಾದರ್ ಗೂ ರವಾನಿಸಿದ್ದಾರೆ.
ಇದೇ ವೇಳೆ, ಘಟನೆ ಬಗ್ಗೆ ಪಾರದರ್ಶಕ ತನಿಖೆಯಾಗಿಸುವ ನಿಟ್ಟಿನಲ್ಲಿ ಪೊಲೀಸ್ ಕಮಿಷನರ್ ಪ್ರಕರಣದ ತನಿಖಾಧಿಕಾರಿಯಾಗಿ ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಅವರನ್ನು ನೇಮಿಸಿದ್ದಾರೆ. ಪ್ರಕರಣ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದರೂ, ಅದರ ತನಿಖೆಯನ್ನು ನಗರ ಠಾಣೆಯ ಇನ್ಸ್ ಪೆಕ್ಟರ್ ಗೆ ವರ್ಗಾಯಿಸಿದ್ದಾರೆ. ನಾಗರಾಜ್ ಅವರು ಅಪರಾಧ ತನಿಖೆಯಲ್ಲಿ ಪಳಗಿದ ಕೈಯಾಗಿದ್ದು, ಪ್ರಕರಣದ ತನಿಖೆ ಶುರು ಮಾಡಿದ್ದಾರೆ.
ಇತ್ತ ದಕ್ಷಿಣ ಕನ್ನಡ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ಡಿ.27ರ ಶುಕ್ರವಾರ ನಿಗದಿಯಾಗಿದ್ದ ಜಾಮೀನು ಅರ್ಜಿ ಸರ್ಕಾರಿ ರಜೆ ಘೋಷಣೆಯಾದ ಹಿನ್ನೆಲೆಯಲ್ಲಿ ಮತ್ತೆ ಮುಂದೂಡಿಕೆಯಾಗಿದ್ದು, ಡಿ.30ರಂದು ವಿಚಾರಣೆಗೆ ಬರಲಿದೆ. ಸದ್ಯ ಜೈಲು ಪಾಲಾಗಿದ್ದರೂ ಖಾಸಗಿ ಆಸ್ಪತ್ರೆಯಲ್ಲಿರುವ ಅನಿಲ್ ಲೋಬೊಗೆ ಸರ್ಜರಿ ಅಗತ್ಯವಿದೆಯೆಂದು ಮತ್ತೊಂದು ಅರ್ಜಿ ಕೋರ್ಟಿಗೆ ಸಲ್ಲಿಕೆಯಾಗಿದೆ. ಡಿ.26ರಂದು ಸರ್ಜರಿ ಕುರಿತ ಅರ್ಜಿ ವಿಚಾರಣೆಗೆ ಬಂದಿದ್ದು, ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಿಸಿದ್ದಾರೆ.
ಜಿಲ್ಲಾ ಸರ್ಜನ್ ಹೊರತುಪಡಿಸಿ ಖಾಸಗಿ ವೈದ್ಯರ ಶಿಫಾರಸನ್ನು ಪರಿಗಣಿಸಬಾರದೆಂದು ಆಕ್ಷೇಪ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಈ ಬಗ್ಗೆ ಉಲ್ಲೇಖಿತ ಆದೇಶವಿದ್ದರೆ ಹಾಜರುಪಡಿಸುವಂತೆ ತಿಳಿಸಿದ್ದು, ಸರ್ಕಾರಿ ವಕೀಲರು ಸಮಯಾವಕಾಶ ಕೇಳಿದ್ದಾರೆ. ಈ ಕುರಿತಾಗಿಯೂ ಮುಂದಿನ ವಿಚಾರಣೆಯನ್ನು ಡಿ.30ಕ್ಕೆ ಮುಂದೂಡಲಾಗಿದೆ. ಇದೇ ವೇಳೆ, ಮನೋಹರ್ ಪಿರೇರಾ ಸಾವಿನ ಬಗ್ಗೆ ಬ್ಯಾಂಕಿನ ಅಧಿಕಾರಿಗಳಿಂದ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆಂದು ತಿಳಿದುಬಂದಿದೆ.
Mangalore MCC Bank Anil Lobo Arrest, Inspector TD Nagraj appointed as IO, Christan representatives have appeled the Police commissioner Anupam Agarwal for strict action against lobo. The Mangaluru City police has arrested the chairman of Mangalore Catholic Cooperative (MCC) Bank, Anil Lobo, for alleged abetment to suicide of one Manohar Pereira, 47, in Cutinho Padavu in Permanki village of the city on Tuesday.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm