ಬ್ರೇಕಿಂಗ್ ನ್ಯೂಸ್
28-12-24 10:49 pm Mangalore Correspondent ಕರಾವಳಿ
ಮಂಗಳೂರು, ಡಿ.28: ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡುವ ಕುರಿತಾಗಿ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಜೊತೆ ಚರ್ಚಿಸಿ ನಿರ್ಧರಿಸುವುದಾಗಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂದರ್ಭದಲ್ಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಈ ಕುರಿತು ಸ್ಪೀಕರ್ ಅನುಮತಿ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಮೇಲಿನಂತೆ ಉತ್ತರಿಸಿದರು. ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್, ಏಡ್ಸ್ ಇಂಜೆಕ್ಷನ್ ಚುಚ್ಚಿದ ಆರೋಪ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗೆ ಬಂಧನಕ್ಕೊಳಗಾಗಿ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆಂಬ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ಘಟನೆ ನಡೆಯಬಾರದಿತ್ತು. ಈ ಬಗ್ಗೆ ವಿಧಾನ ಪರಿಷತ್ತಿನ ಸಭಾಪತಿಯವರೇ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಎಂಟು ದಿನ ನಡೆದ ಅಧಿವೇಶನದಲ್ಲಿ 63 ಗಂಟೆ 57 ನಿಮಿಷ ಕಲಾಪ ನಡೆಸಲಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾಗಿ 13 ಗಂಟೆ 11 ನಿಮಿಷ ಚರ್ಚೆ ನಡೆಸಲಾಗಿದ್ದು 49 ಸದಸ್ಯರು ಇದರಲ್ಲಿ ಭಾಗವಹಿಸಿದ್ದಾರೆ. 16 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಯುಟಿ ಖಾದರ್ ಮಾಹಿತಿ ನೀಡಿದರು.
Prosecution against Munirathna will be discussed says Khader in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am