ಬ್ರೇಕಿಂಗ್ ನ್ಯೂಸ್
30-12-24 10:45 pm Mangalore Correspondent ಕರಾವಳಿ
ಮಂಗಳೂರು, ಡಿ.30: ಮಂಗಳೂರಿನಿಂದ ಬೆಂಗಳೂರು ತೆರಳುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾದ ಕನ್ನಡ ಸೀರಿಯಲ್ ಕಲಾವಿದ ಶೋಭರಾಜ್ ಅವರ ಪತ್ನಿ ದೀಪಿಕಾ ಸುವರ್ಣ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಆಯೋಗ ಒಂದು ಲಕ್ಷ ಪರಿಹಾರ ನೀಡಲು ಖಾಸಗಿ ಬಸ್ ಕಂಪನಿಗೆ ಆದೇಶಿಸಿದೆ.
2022ರ ಆಗಸ್ಟ್ 16ರಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲು ದೀಪಿಕಾ ಸುವರ್ಣ ಸೀಬರ್ಡ್ ಕಂಪನಿಯ ಸ್ಲೀಪರ್ ಬಸ್ಸಿನಲ್ಲಿ ಟಿಕೆಟ್ ಬುಕ್ ಮಾಡಿದ್ದರು. ರೆಡ್ ಬಸ್ ಆನ್ಲೈಲ್ ಏಪ್ ನಲ್ಲಿ ಬಸ್ ಬುಕ್ ಮಾಡಿದ್ದಾಗಲೇ ಬಸ್ ಸುವ್ಯವಸ್ಥೆ ಇದೆಯಾ ಎಂದು ಕೇಳಿ ತಿಳಿದುಕೊಂಡಿದ್ದರು. ಸೀಬರ್ಡ್ ಬಸ್ಸಿನಲ್ಲಿ ಉತ್ತಮ ಸೌಲಭ್ಯ ಇದೆಯೆಂದು ರೆಡ್ ಬಸ್ ಸಿಬಂದಿ ತಿಳಿಸಿದ್ದರು. ರಾತ್ರಿ 10.30ಕ್ಕೆ ಮಂಗಳೂರಿನಲ್ಲಿ ಬಸ್ ಹತ್ತಿದ್ದು ಕೆಲ ಹೊತ್ತಿನಲ್ಲೇ ತಿಗಣೆ ಕಾಟ ಶುರುವಾಗಿತ್ತು. ಬಳಿಕ ತಿಗಣೆ ಕಾಟ ತಾಳಲಾರದೆ ಬಸ್ ಸಿಬಂದಿಗೂ ಮಾಹಿತಿ ನೀಡಿದ್ದರು. ಆದರೆ ಬಸ್ ಸಿಬಂದಿ ದೀಪಿಕಾ ಮಾತಿಗೆ ಕ್ಯಾರೆಂದಿರಲಿಲ್ಲ.
ಮರುದಿನ ಬೆಂಗಳೂರು ತಲುಪಿದಾಗ, ಕುತ್ತಿಗೆ, ಬೆನ್ನು ಸೇರಿದಂತೆ ಎಲ್ಲೆಡೆ ನೋವು ಶುರುವಾಗಿತ್ತು. ಅಸೌಖ್ಯದಿಂದಾಗಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತಾಗಿತ್ತು. ದೈಹಿಕ ನೋವಿನಿಂದಾಗಿ 15 ದಿನಗಳ ಕಾಲ ಬೆಡ್ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಆ ಸಂದರ್ಭದಲ್ಲಿ ಶೋಭರಾಜ್ ಮತ್ತು ದೀಪಿಕಾ ಸುವರ್ಣ ಜೊತೆಯಾಗಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುತ್ತಿದ್ದ ರಾಜರಾಣಿ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುತ್ತಿದ್ದರು. ಮರುದಿನ ಶೂಟಿಂಗ್ ಇದ್ದುದರಿಂದ ತುರ್ತಾಗಿ ಮಂಗಳೂರಿನಿಂದ ದೀಪಿಕಾ ತೆರಳಿದ್ದರು. ರಿಯಾಲಿಟಿ ಶೋನಿಂದಾಗಿ ಇವರು ರಾಜ್ಯದಾದ್ಯಂತ ಉತ್ತಮ ವೀಕ್ಷಕರನ್ನೂ ಪಡೆದಿದ್ದರು. ಆದರೆ ತಿಗಣೆ ಕಾಟದಿಂದಾಗಿ ಅಸೌಖ್ಯ ಉಂಟಾಗಿದ್ದರಿಂದ ದೀಪಿಕಾಗೆ ಎರಡು ವಾರ ಕಾಲ ಶೋನಲ್ಲಿ ಭಾಗವಹಿಸುವುದು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ದಂಪತಿಗೆ ದೊಡ್ಡ ನಷ್ಟವಾಗಿತ್ತು.
ರಿಯಾಲಿಟಿ ಶೋದಲ್ಲಿ ಭಾಗವಹಿಸದ್ದರಿಂದ ಇವರ ತಂಡ ಎಲಿಮಿನೇಟ್ ಆಗಿದ್ದಲ್ಲದೆ, ಅದರಿಂದ ಬರುತ್ತಿದ್ದ ಆದಾಯಕ್ಕೆ ಕತ್ತರಿ ಬಿದ್ದಿತ್ತು. ಇವರಿಗೆ ಒಂದು ಶೋಗೆ ಕಲರ್ಸ್ ವಾಹಿನಿಯಿಂದ 40 ಸಾವಿರ ಸಂಭಾವನೆ ಸಿಗುತ್ತಿತ್ತು. ಸೀಬರ್ಡ್ ಬಸ್ಸಿನ ಅವ್ಯವಸ್ಥೆಯಿಂದಾಗಿ ಬೇಸತ್ತ ದೀಪಿಕಾ ಸುವರ್ಣ ಮಂಗಳೂರಿನ ಗ್ರಾಹಕರ ನ್ಯಾಯಾಲಯದಲ್ಲಿ ಬಸ್ ಕಂಪನಿ ಮತ್ತು ಬಸ್ ಟಿಕೆಟ್ ಬುಕ್ ಮಾಡಿದ್ದ ರೆಡ್ ಬಸ್ ವಿರುದ್ಧ ದೂರು ದಾಖಲಿಸಿದ್ದರು. ತನಗಾದ ಆಸ್ಪತ್ರೆ ವೆಚ್ಚ 18,650 ರೂ.ವನ್ನು ವರ್ಷಕ್ಕೆ ಶೇ. 15ರ ಬಡ್ಡಿ ಸಹಿತ ನೀಡಬೇಕು. ಅಲ್ಲದೆ, ತನಗಾದ ಮಾನಸಿಕ ಕಿರುಕುಳಕ್ಕೆ ಪ್ರತಿಯಾಗಿ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಕೇಳಿಕೊಂಡಿದ್ದರು. ಅಲ್ಲದೆ, ವ್ಯಾಜ್ಯಕ್ಕಾದ ವೆಚ್ಚವನ್ನೂ ಭರಿಸಬೇಕೆಂದು ಕೋರಿದ್ದರು.
ವಿಚಾರಣೆ ನಡೆಸಿದ ಗ್ರಾಹಕರ ವ್ಯಾಜ್ಯಗಳ ಆಯೋಗದ ಅಧ್ಯಕ್ಷ ಸೋಮಶೇಖರಪ್ಪ ಹಂಡಿಗೋಳ್ ಮತ್ತು ಮಹಿಳಾ ಸದಸ್ಯೆ ಶಾರದಮ್ಮ ಎಚ್.ಜಿ. ಅವರು ಪ್ರಕರಣದಲ್ಲಿ ಅಂತಿಮ ಆದೇಶ ಮಾಡಿದ್ದು, ಆಸ್ಪತ್ರೆಗೆ ತಗಲಿದ ವೆಚ್ಚ 18,650 ರೂ.ವನ್ನು ಅರ್ಜಿ ದಾಖಲಿಸಿದ 6-4-2023ರಿಂದ ಅನ್ವಯವಾಗುವಂತೆ ವರ್ಷಕ್ಕೆ ಆರು ಶೇಕಡಾ ಬಡ್ಡಿ ಸಹಿತ ಪಾವತಿ ಮಾಡಬೇಕು. ಅಲ್ಲದೆ, ಬಸ್ ಟಿಕೆಟ್ ದುಡ್ಡು 840 ರೂಪಾಯಿಯನ್ನು ವಾರ್ಷಿಕ ಆರು ಶೇ. ಬಡ್ಡಿ ಸಹಿತ ಅರ್ಜಿದಾರರಿಗೆ ಪಾವತಿಸಬೇಕು. ಸೇವೆಯಲ್ಲಿ ವ್ಯತ್ಯಯಗೊಳಿಸಿದ್ದಲ್ಲದೆ, ಅರ್ಜಿದಾರ ಮಹಿಳೆಗಾದ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪ್ರತಿಯಾಗಿ ಒಂದು ಲಕ್ಷ ರೂ. ಪರಿಹಾರವನ್ನು ವಾರ್ಷಿಕ ಶೇ.6ರ ಬಡ್ಡಿಯೊಂದಿಗೆ ನೀಡಬೇಕು. ಅಲ್ಲದೆ, ಅರ್ಜಿದಾರರಿಗೆ ಆಗಿರುವ ವಕೀಲಿಕೆ ವೆಚ್ಚ ಹತ್ತು ಸಾವಿರವನ್ನೂ ಭರಿಸಬೇಕು ಎಂದು ತೀರ್ಪು ನೀಡಿದ್ದಾರೆ.
Cour orders redBus and sea bird for compensation to actor Shobhraj Pavoor for poor bus service from Mangalore to Bangalore.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm