ಬ್ರೇಕಿಂಗ್ ನ್ಯೂಸ್
31-12-24 06:45 pm Mangalore Correspondent ಕರಾವಳಿ
ಮಂಗಳೂರು, ಡಿ.31: ಪತ್ನಿ ಮೇಲಿನ ದ್ವೇಷದಲ್ಲಿ ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಲೆಗೈದ ತಂದೆಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ಘೋಷಿಸಿದೆ.
ಮುಲ್ಕಿ ಠಾಣೆ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಘಟನೆ ನಡೆದಿತ್ತು. ಆರೋಪಿ ಹಿತೇಶ್ ಶೆಟ್ಟಿಗಾರ್ (36) ಎಂಬಾತನಿಗೆ ಕೋರ್ಟ್ ಗಲ್ಲು ಶಿಕ್ಷೆ ನೀಡಿದೆ. ಕುಡಿದು ಬಂದು ಪತ್ನಿ ಜೊತೆಗೆ ಜಗಳವಾಡುತ್ತಿದ್ದ ಪತಿ ಹಿತೇಶ್, ಅದೇ ದ್ವೇಷದಲ್ಲಿ ಆಗಷ್ಟೆ ಶಾಲೆಯಿಂದ ಮನೆಗೆ ಬಂದಿದ್ದ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ್ (11), ದಕ್ಷಿತ್ (5) ಅವರನ್ನು ಬಾವಿಗೆ ದೂಡಿ ಹಾಕಿದ್ದಾನೆ. ಈ ವೇಳೆ, ದೊಡ್ಡ ಮಗಳು ರಶ್ಮಿತಾ ಬಾವಿಗೆ ಅಳವಡಿಸಿದ್ದ ಪಂಪಿನ ಪೈಪ್ ನಲ್ಲಿ ನೇತಾಡಿ ಜೀವ ರಕ್ಷಿಸಲು ಪ್ರಯತ್ನ ಪಟ್ಟಿದ್ದಾಳೆ. ಆದರೆ ಪೈಪನ್ನು ಕತ್ತಿಯಿಂದ ಕಡಿದು ಆಕೆಯನ್ನು ನೀರಿಗೆ ಬೀಳುವಂತೆ ಮಾಡಿ ಅಮಾನುಷ ಕೃತ್ಯ ಎಸಗಿದ್ದ.
ಆಬಳಿಕ ಹೊಟೇಲ್ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಪತ್ನಿ ಲಕ್ಷ್ಮೀಯನ್ನೂ ಆರೋಪಿ ಹಿತೇಶ್ ಬಾವಿಗೆ ದೂಡಲು ಯತ್ನಿಸಿದ್ದಾನೆ. ಈ ವೇಳೆ, ಆಕೆ ಬೊಬ್ಬೆ ಹಾಕಿದ್ದು ಸ್ಥಳಕ್ಕೆ ಓಡಿ ಬಂದ ಹೂವಿನ ವ್ಯಾಪಾರಿ ಬಾವಿಯಿಂದ ರಕ್ಷಣೆ ಮಾಡಿದ್ದಾರೆ. ಅಲ್ಲದೆ, ತನ್ನ ಪತಿ ಮಾಡಿದ ಕೃತ್ಯದ ಬಗ್ಗೆ ಪತ್ನಿ ಲಕ್ಷ್ಮೀ ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ್ದರು. ಕೃತ್ಯದ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕುಸುಮಾಧರ್ ಅವರು ಕೋರ್ಟಿಗೆ ದೋಷಾರೋಪ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ಮೋಹನ್ ಕುಮಾರ್ ವಾದ ಮಂಡಿಸಿದ್ದರು. ವಿಚಾರಣೆ ಬಳಿಕ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಸಂಧ್ಯಾ ಅವರು ಡಿ.31ರಂದು ಶಿಕ್ಷೆ ಘೋಷಣೆ ಮಾಡಿದ್ದು ಆರೋಪಿಯ ಅಮಾನುಷ ಕೃತ್ಯಕ್ಕಾಗಿ ಗಲ್ಲು ಶಿಕ್ಷೆ ವಿಧಿಸಿದ್ದಾರೆ.
A 43-year-old man has been sentenced to death by the Hon’ble Third Additional District and Sessions Court in Mangaluru for killing his three children and attempting to murder his wife.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm