ಬ್ರೇಕಿಂಗ್ ನ್ಯೂಸ್
15-12-20 12:32 pm Mangalore Correspondent ಕರಾವಳಿ
ಬೆಂಗಳೂರು, ಡಿ.15: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಚಾರಿಟೆಬಲ್ ಎಂಡೋಮೆಂಟ್ ಕಾಯ್ದೆ (ಎಚ್ಆರ್ಐಸಿಇ ಕಾಯ್ದೆ) ಅನ್ವಯ, ಹಿಂದೂ ಧರ್ಮದವರ ಹೊರತಾಗಿ ಇತರರು ಧಾರ್ಮಿಕ ಇಲಾಖೆ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬಾರದು ಎಂಬ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ದೂರಿನ ಬಗ್ಗೆ ವಾದ ಆಲಿಸಿದ ಬಳಿಕ "ಹಿಂದೂ ಧರ್ಮ ಎಂದೂ ಸಂಕುಚಿತವಲ್ಲ ; ಹಿಂದೂ ಧರ್ಮ ಇಷ್ಟೊಂದು ಸಂಕುಚಿತ ಮನೋಭಾವದವರನ್ನು ಒಳಗೊಂಡಿಲ್ಲ" ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಅಭಿಪ್ರಾಯಪಟ್ಟಿದ್ದಾರೆ.
ಸಂವಿಧಾನ ಜಾರಿಯಲ್ಲಿರುವ ದೇಶದಲ್ಲಿ ನಾವು ಇಂತಹ ಅರ್ಜಿಗಳನ್ನು ನ್ಯಾಯಾಲಯದಲ್ಲಿ ಪರಿಗಣಿಸುವುದಿಲ್ಲ. ನಮ್ಮನ್ನು 100 ವರ್ಷ ಹಿಂದೆ ತೆಗೆದುಕೊಂಡು ಹೋಗುವಂತಹ ಅರ್ಜಿಗಳನ್ನು ಸ್ವೀಕರಿಸಲಾಗದು " ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.
ಎಚ್ಆರ್ಐಸಿಇ ಕಾಯ್ದೆಯ ಸೆಕ್ಷನ್ 7ರ ಕಟ್ಟುನಿಟ್ಟಿನ ಜಾರಿಗೆ ಆಗ್ರಹಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದರ ಅನ್ವಯ ಈ ಕಾಯ್ದೆಯಡಿ ರಚಿಸಿದ ಆಯುಕ್ತರ ಕಚೇರಿಯಲ್ಲಿ ಹಿಂದೂ ಧರ್ಮದವರನ್ನು ಹೊರತುಪಡಿಸಿ ಇತರರು ಸೇವೆ ಸಲ್ಲಿಸಲು ಅವಕಾಶ ನೀಡಬಾರದು ಎಂದು ಕೋರಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದಾಗ ಐಎಎಸ್ ಅಧಿಕಾರಿ ಎ.ಬಿ.ಇಬ್ರಾಹಿಂ ಅವರ ಹೆಸರನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿರುವುದನ್ನು ಅರ್ಜಿದಾರ ಎನ್.ಪಿ.ಅಮೃತೇಶ್ ಪ್ರಶ್ನಿಸಿದ್ದರು. ಇದಲ್ಲದೆ ಆಯುಕ್ತರ ಕಚೇರಿ ಅಧೀಕ್ಷಕರಾಗಿ ಮುಹಮ್ಮದ್ ದೇಶವ್ ಅಲಿಖಾನ್ ಅವರನ್ನು ನೇಮಕ ಮಾಡಿದ್ದನ್ನು ಭಾರತ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಇನ್ನೊಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಅರ್ಜಿಗಳನ್ನು ವಜಾಗೊಳಿಸಿದೆ.
"ಉಪ ಆಯುಕ್ತರು ಸಿದ್ಧತೆಗಳ ಮೇಲ್ವಿಚಾರಣೆಗೆ ದೇವಸ್ಥಾನ ಪ್ರವೇಶಿಸಿದರೆ ಸ್ವರ್ಗ ಕೆಳಗೆ ಬೀಳುತ್ತದೆಯೇ? ಹಿಂದು ಧರ್ಮ ಎಂದೂ ಸಂಕುಚಿತವಲ್ಲ; ಹಿಂದೂ ಧರ್ಮ ಇಷ್ಟೊಂದು ಸಂಕುಚಿತ ಮನೋಭಾವದವರನ್ನು ಒಳಗೊಂಡಿಲ್ಲ" ಎಂದು ನ್ಯಾಯಪೀಠ ಹೇಳಿದೆ.
The Karnataka High Court on Monday dismissed writ petitions which sought for directions that non-Hindus should not be permitted to work in the office of Commissioners under the Karnataka Hindu Religious Institutions and Charitable Endowments Act(HRICE Act).
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm