ಬ್ರೇಕಿಂಗ್ ನ್ಯೂಸ್
15-12-20 12:50 pm Mangalore Correspondent ಕರಾವಳಿ
ಮಂಗಳೂರು, ಡಿ.15: ಕೊರೊನಾ ಸೋಂಕಿನ ಮುಂಜಾಗ್ರತೆಗಾಗಿ ಡಿ.17ರಿಂದ 20ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದ ದೇವರ ವಾರ್ಷಿಕ ಜಾತ್ರೆ ಸಂದರ್ಭದಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆಯುತ್ತಿದ್ದು ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಎರಡನೇ ಅಲೆ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಪ್ರವೇಶ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಮುಂಗಡ ನೋಂದಾಯಿಸಿರುವ ಭಕ್ತಾದಿಗಳಿಗೆ ಕೇವಲ ರಥೋತ್ಸವ ಸೇವೆಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ದೇವಸ್ಥಾನದ ಆಡಳಿತಾಧಿಕಾರಿ ಯತೀಶ್ ಉಳ್ಳಾಲ್ ಮನವಿಯ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. 50 ಸಾವಿರಕ್ಕೂ ಅಧಿಕ ಭಕ್ತಾದಿಗಳು ಉತ್ಸವ ಸಂದರ್ಭದಲ್ಲಿ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಸ್ತುತ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆ ಆಗಿರುವುದರಿಂದ ಹೆಚ್ಚುವರಿ ಪೊಲೀಸರ ನಿಯೋಜನೆ ಕಷ್ಟ. ಆದ್ದರಿಂದ ಕೋವಿಡ್ ನಿಯಮ ಪಾಲನೆಯೂ ಕಷ್ಟ ಅನ್ನುವ ಕಾರಣಕ್ಕೆ ಚಂಪಾಷಷ್ಠಿ ಉತ್ಸವದ ಸಂದರ್ಭ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Due to raise of Coronavirus cases the entry of Devotees is been restricted at Kukke Subramanya temple from 17th to 20th December.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm