ಬ್ರೇಕಿಂಗ್ ನ್ಯೂಸ್
05-01-25 02:13 pm Mangalore Correspondent ಕರಾವಳಿ
ಮಂಗಳೂರು, ಜ.5 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದರ ಜೊತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್ ಅನ್ನು ಸ್ಥಾಪಿಸುವುದರಿಂದ ಯುವಜನತೆಯನ್ನು ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ವಿಶ್ವದರ್ಜೆ ಶಿಕ್ಷಣ ಸಂಸ್ಥೆಗಳು ಇರುವ ಹಿನ್ನಲೆಯಲ್ಲಿ ಸೈನಿಕ ಶಾಲೆ ಸ್ಥಾಪಿಸುವುದು ಶೈಕ್ಷಣಿಕವಾಗಿಯೂ ಹೆಚ್ಚಿನ ಅನುಕೂಲ ಒದಗಿಸಲಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.
ದೇಶದ ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಕ್ಯಾಪ್ಟನ್ ಪ್ರಾಂಜಲ್ ಹಾಗೂ ಕಮಾಂಡರ್ ಜಾರ್ಜ್ ಮಾರ್ಟಿಸ್ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಇಲಾಖೆಯಿಂದ ಆಗಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ
ತಮ್ಮ ಭೇಟಿ ವೇಳೆ ಕ್ಯಾ. ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯರೂಪಕ್ಕೆ ತರಬಹುದಾದ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರಾಜನಾಥ್ ಸಿಂಗ್ ಅವರಿಂದ ಮಾರ್ಗದರ್ಶನವನ್ನು ಪಡೆದುಕೊಂಡರು. ಇದೇ ವೇಳೆ ಕ್ಯಾ. ಚೌಟ ಅವರು ಸಚಿವ ರಾಜನಾಥ್ ಸಿಂಗ್ ಅವರಿಗೆ ಕರಾವಳಿಯ ಸಂಸ್ಕೃತಿ ಸಂಕೇತವಾದ ಕಂಬಳದ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.
Dakshina Kannada MP Capt Brijesh Chowta met with Defence Minister Rajnath Singh to propose significant defence infrastructure initiatives for the district, including the establishment of a Sainik School and a military base in Mangaluru.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm