ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.
ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
21-08-25 10:31 pm
Bangalore Correspondent
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm