ಬ್ರೇಕಿಂಗ್ ನ್ಯೂಸ್
10-01-25 11:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.10: ವಾರದ ಹಿಂದೆ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಇದೀಗ ಹಿಂದೂ ಯುವಕನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾಳೆ. ಹರೀಶ್ ಗೌಡ ಮತ್ತು ಯುವತಿ, ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ವಿವಾಹದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಹರೀಶ್ ಗೌಡ ಹಾಗೂ ಮೂಡಬಿದಿರೆಯ ಯುವತಿ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಈ ನಡುವೆ ವಾರದ ಹಿಂದೆ ಮೂಡಬಿದಿರೆಯ ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಶುಕ್ರವಾರ ಯುವತಿ ಮತ್ತು ಹರೀಶ್ ಗೌಡ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಅಲ್ಲದೆ ಬೆಳ್ತಂಗಡಿ ವಿವಾಹ ನೊಂದಣಿ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿದ್ದಾರೆ. ಯುವತಿ ಪತ್ತೆಯಾದ ವಿಚಾರ ಕೇಳಿ ಬೆಳ್ತಂಗಡಿಗೆ ಆಕೆಯ ಪೋಷಕರು ಆಗಮಿಸಿದ್ದರು. ಆದರೆ ಜೋಡಿ ತಾವು ವಿವಾಹವಾಗಿರುವುದಾಗಿ ಹೇಳಿದ್ದರಿಂದ ಆಕೆಯನ್ನು ಬಿಟ್ಟು ಪೋಷಕರು ತೆರಳಿದ್ದಾರೆ.
Missing muslim girl found married in temple with Hindu boy at Belthangady in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm