ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm