ಬ್ರೇಕಿಂಗ್ ನ್ಯೂಸ್
23-01-25 05:43 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆಯ ಕಾರ್ಯಕರ್ತರು ದಾಳಿ ನಡೆಸಿದ್ದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ತಿರುವು ಪಡೆದಿದೆ. ಯುವಕರು ಕಾನೂನು ಕೈಗೆತ್ತಿಕೊಂಡಿದ್ದಾರೆಂದು ಮಸಾಜ್ ಪಾರ್ಲರ್ ಮಾಲೀಕನ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದು, ದಾಳಿ ಹೊಣೆ ಹೊತ್ತುಕೊಂಡ ರಾಮ ಸೇನಾ ಮುಖಂಡ ಪ್ರಸಾದ್ ಅತ್ತಾವರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿಯಾದ ಬೆನ್ನಲ್ಲೇ ಮಾಧ್ಯಮದವರು ಪ್ರಸಾದ್ ಅತ್ತಾವರ್ ಪ್ರತಿಕ್ರಿಯೆ ಪಡೆಯಲು ಕುಡುಪು ಬಳಿಯಿರುವ ಅವರ ನಿವಾಸಕ್ಕೆ ತೆರಳಿದ್ದರು. ಅಷ್ಟರಲ್ಲಿಯೇ ಪೊಲೀಸರು ಕೂಡ ಅಲ್ಲಿಗೆ ತಲುಪಿದ್ದರು. ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದಾಗಲೇ ಪೊಲೀಸರು ಪ್ರಸಾದ್ ಅವರನ್ನು ಮನೆಯಿಂದ ಹೊರಕ್ಕೆಳೆದುಕೊಂಡು ಬಂದಿದ್ದಾರೆ. ಆನಂತರ, ಪೊಲೀಸ್ ಕಾರಿನಲ್ಲಿ ಕೂರಿಸಿದ್ದಾರೆ.
ಇದರ ನಡುವೆಯೇ ಮಾಧ್ಯಮಕ್ಕೆ ಹೇಳಿಕೆ ನೀಡಿದ ಪ್ರಸಾದ್ ಅತ್ತಾವರ್, ನಮ್ಮ ಕಾರ್ಯಕರ್ತರೇ ದಾಳಿ ನಡೆಸಿರೋದು. ಸುಮ್ಮನೆ ದಾಳಿ ನಡೆಸಿದ್ದಲ್ಲ. ಅಲ್ಲಿ 15-16 ವರ್ಷದ ಕಾಲೇಜು ಹುಡುಗಿಯರನ್ನು ತಂದಿಟ್ಟು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದರು. ಇದರ ಬಗ್ಗೆ ಪೊಲೀಸರು ಕ್ರಮ ಜರುಗಿಸಿರಲಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಅವರನ್ನು ಬಂಧನ ಮಾಡಿದ್ದು, ಇತರೇ ಕಾರ್ಯಕರ್ತರ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ 8-10 ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಿದ್ದರು.
Attack on saloon: Ram Sena Leader Prasad Attavar was arrested by CCB police in Mangalore while he was talking to media persons at his residence. Colours unisex saloon was vandalised by Ram Sena activists alleging illegal activity.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm