ಬ್ರೇಕಿಂಗ್ ನ್ಯೂಸ್
27-01-25 10:45 pm Mangalore Correspondent ಕರಾವಳಿ
ಮಂಗಳೂರು, ಜ.27 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ "ಬ್ಯಾಕ್ ಟು ಊರು" ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಈಟ್ಯಾಗ್ ಎನರ್ಜಿ ಟೆಕ್ನಿಕ್ ಪ್ರೈವೇಟ್ ಲಿಮಿಟೆಡ್ (ಯುರೋಪಿಯನ್ ಟೆಕ್ನಾಲಜಿ ಅಲಯೆನ್ಸ್ ಗ್ರೂಪ್) ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ 300 ಕೋಟಿ ರೂ. ಮೊತ್ತದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಜೊತೆಗೆ ತನ್ನ ಜಾಗತಿಕ ಕಚೇರಿಯನ್ನೂ ಮಂಗಳೂರಿಗೆ ಸ್ಥಳಾಂತರಿಸಲು ಆಸಕ್ತಿ ತೋರಿದೆ. ಈ ಕುರಿತು ಈಟ್ಯಾಗ್ ಗ್ರೂಪ್ ಹಾಗೂ ಮಂಗಳೂರು ಎಸ್ಇಝೆಡ್ ಬಂಡವಾಳ ಹೂಡಿಕೆ ಕುರಿತ ಒಪ್ಪಂದ ಪತ್ರಕ್ಕೆ ಸಹಿ ಹಾಕಿತು.
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈಟ್ಯಾಗ್ ಕಂಪೆನಿಯ ಸಿಇಓ ಪ್ರಕಾಶ್ ಪಿರೇರಾ ಹಾಗೂ ಎಸ್ಇಝೆಡ್ ಸಿಇಓ ಸೂರ್ಯನಾರಾಯಣ ಅವರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಸಮ್ಮುಖದಲ್ಲಿ ಒಡಂಬಡಿಕೆ(ಎಂಒಯು) ಪತ್ರಕ್ಕೆ ಪರಸ್ಪರ ಸಹಿ ಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ಸಂಸದ ಚೌಟ, ದೇಶ-ವಿದೇಶದಲ್ಲಿರುವ ಮಂಗಳೂರು ಮೂಲದ ಉದ್ಯಮಿಗಳನ್ನು ಮರಳಿ ಕರೆತರುವ ಭಾಗವಾಗಿ "ಬ್ಯಾಕ್ ಟು ಊರು" ಪರಿಕಲ್ಪನೆ ಆರಂಭಿಸಿದ್ದು, ಇದಕ್ಕೆ ಇಷ್ಟು ಬೇಗ ದೊಡ್ಡ ಮಟ್ಟದ ಯಶಸ್ವಿ ಸಿಗುತ್ತದೆಂದು ಭಾವಿಸಿರಲಿಲ್ಲ. 'ಬ್ಯಾಕ್ ಟು ಊರು' ಕಲ್ಪನೆಯಡಿ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿರುವ ಎರಡನೇ ಕಂಪನಿ ಇದಾಗಿದೆ. ಈಟ್ಯಾಗ್ ಕಂಪೆನಿಯು ಸುಸ್ಥಿರ ಇಂಧನ ಹಾಗೂ ಇವಿ ತಂತ್ರಜ್ಞಾನ ಅಭಿವೃದ್ಧಿಗೆ ಮಂಗಳೂರಿನಲ್ಲಿ 300 ಕೋಟಿ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ತೋರಿಸಿರುವುದು ಬಹಳ ಸಂತಸ ತಂದಿದೆ. ಅಲ್ಲದೆ, ಭಾರತವನ್ನು ಸುಸ್ಥಿರ ಇಂಧನ ಉತ್ಪಾದನೆ ಹಾಗೂ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮುಂಚೂಣಿಗೆ ಒಯ್ಯುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಪ್ರಯತ್ನಕ್ಕೆ ಇನ್ನಷ್ಟು ಉತ್ತೇಜನ ನೀಡಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೇಕ್ ಇನ್ ಇಂಡಿಯಾದಡಿ ಹಲವಾರು ಕಂಪನಿಗಳಿಗೆ ಉತ್ತೇಜನ ನೀಡುತ್ತಿದ್ದಾರೆ. ಇದೀಗ ಈಟ್ಯಾಗ್ ಕಂಪೆನಿಯು ಬ್ಯಾಕ್ ಟು ಊರಿಗೆ ಬರುತ್ತಿರುವುದು ಮೋದಿ ಅವರ ಮೇಕ್ ಇನ್ ಇಂಡಿಯಾಕ್ಕೆ 'ಕುಡ್ಲ'ದ ಕೊಡುಗೆಯಾಗಿದೆ. ಆ ಮೂಲಕ, ಮೋದಿ ಸರ್ಕಾರವು ಉದ್ಯಮ ಸ್ಥಾಪಿಸುವುದಕ್ಕೆ ಮುಂದೆ ಬರುವ ಕಂಪೆನಿಗಳಿಗೆ ಅಗತ್ಯ ಮೂಲಸೌಕರ್ಯ, ಪೂರಕ ವಾತಾವರಣ ಸೃಷ್ಟಿಸುವುದಕ್ಕೆ ಬದ್ಧತೆ ತೋರಿಸುತ್ತಿದೆ ಎಂದು ಕ್ಯಾ. ಚೌಟ ಅಭಿಪ್ರಾಯಪಟ್ಟರು.
ಅಧಿವೇಶನ ಬಳಿಕ ಮತ್ತಷ್ಟು ಉತ್ತೇಜನ
ಬ್ಯಾಕ್ ಟು ಊರು ಪರಿಕಲ್ಪನೆಗೆ ಹೊಸ ರೂಪ ನೀಡಿ ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಈ ಬಗ್ಗೆ ಈಗಾಗಲೇ ಕೆನರಾ ಚೇಂಬರ್ ಜತೆಗೂ ಮಾತುಕತೆ ನಡೆಸಿದ್ದು, ಅವರು ಕೂಡ ಈ ಅಭಿಯಾನದಲ್ಲಿ ಕೈಜೋಡಿಸುವುದಕ್ಕೆ ಆಸಕ್ತಿ ತೋರಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ಕೂಡಲೇ ಬೆಂಗಳೂರು, ಪುಣೆ, ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿರುವ ನಮ್ಮ ಪ್ರದೇಶದ ಉದ್ಯಮಿಗಳ ಜತೆ ಸಂಪರ್ಕ ಸಾಧಿಸಿ ಬ್ಯಾಕ್ ಟು ಊರು ಅಭಿಯಾನದಡಿ ಮಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ಪ್ರೋತ್ಸಾಹಿಸಲಾಗುವುದು ಎಂದು ಕ್ಯಾ. ಚೌಟ ತಿಳಿಸಿದ್ದಾರೆ.
ಮೂಗ- ಕಿವುಡರಿಗೂ ಉದ್ಯೋಗದಲ್ಲಿ ಆದ್ಯತೆ
ಈಟ್ಯಾಗ್ ಕಂಪೆನಿ ನಿರ್ದೇಶಕ ಪ್ರಕಾಶ್ ಪಿರೇರಾ ಮಾತನಾಡಿ, "ನಮ್ಮ ಕಂಪೆನಿ ಮಂಗಳೂರಿನ ಎಸ್ಇಝೆಡ್ ನಲ್ಲಿ ಸುಸ್ಥಿರ ಇಂಧನ ಮತ್ತು ಇವಿ ಕ್ಷೇತ್ರಗಳಿಗೆ ಸಂಬಂಧಿತ ಉತ್ಪಾದನ ಘಟಕವನ್ನು ಸ್ಥಾಪಿಸಲಿದೆ. ಮಂಗಳೂರಿನಲ್ಲಿ ಜಾಗತಿಕ ಕಚೇರಿ ಪ್ರಾರಂಭಿಸುವ ಮೂಲಕ 2026ರ ವೇಳೆಗೆ ನಮ್ಮ ಉತ್ಪಾದನಾ ಘಟಕ ಪ್ರಾರಂಭಿಸಲಾಗುವುದು. ವಾರ್ಷಿಕ 110 ಮಿಲಿಯನ್ ಡಾಲರ್ ಮೌಲ್ಯದ ಉತ್ಪನ್ನವನ್ನು ರಫ್ತು ಮಾಡುವ ಗುರಿ ಇದೆ. ಅಲ್ಲದೆ ಇಲ್ಲಿನ ಘಟಕದಲ್ಲಿ ವಿಶೇಷ ಚೇತನರಿಗೆ ಶೇ.10ರಷ್ಟು ಉದ್ಯೋಗಾವಕಾಶ ನೀಡಲಿದ್ದು, ಅದರಲ್ಲಿಯೂ ಮೂಗ-ಕಿವುಡರಿಗೆ ತರಬೇತಿ ಕೊಟ್ಟು ಉದ್ಯೋಗ ನೀಡಲಾಗುವುದು. ಮಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ವಿಪುಲ ಅವಕಾಶಗಳಿದ್ದು, ಈಟ್ಯಾಗ್ ಗ್ರೂಪ್'ಗೆ ಈ ಅವಕಾಶ ಕಲ್ಪಿಸಿದ ಎಸ್ಇಝೆಡ್'ನ ಪ್ರಮುಖರು ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಈ ವೇಳೆ ಮಾತನಾಡಿದ ಎಸ್ಇಝೆಡ್ ಸಿಇಒ ಸೂರ್ಯನಾರಾಯಣ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಪ ಮೊದಲನೆಯ ಒಪ್ಪಂದಕ್ಕೆ ಸಹಿ ಮಾಡಿದ ಕೆಲವೇ ವಾರಗಳಲ್ಲಿ ಇದೀಗ ಮತ್ತೊಂದು ದೊಡ್ಡ ಮಟ್ಟದ ಹೂಡಿಕೆಗೆ ಸಂಬಂಧಿಸಿದಂತೆ ಎರಡನೇ ಇಒಐಗೆ ಸಹಿ ಹಾಕುತ್ತಿದ್ದೇವೆ. ಮಂಗಳೂರು ಎಸ್ಇಝೆಡ್ ನಲ್ಲಿ ಮತ್ತಷ್ಟು ಕಂಪನಿಗಳ ಹೂಡಿಕೆ ಆಕರ್ಷಿಸಲು ಇದು ಪ್ರೇರಣೆಯಾಗಲಿದೆ ಎಂದರು. ಈ ವೇಳೆ ಇಟಿಎಜಿ ಎನರ್ಜಿಟೆಕ್ನಿಕ್ ಸಿಇಒ ಶ್ರೀಮತಿ ಜ್ಯೋತಿ ಪಿರೇರಾ, ಎಸ್ಇಝೆಡ್ ಸಿಎಫ್ಒ ರಮೇಶ್ ಕುಮಾರ್ ಮತ್ತು ಸಿಎ ನಿತಿನ್ ಜೆ. ಶೆಟ್ಟಿ ಸೇರಿದಂತೆ ಈಟ್ಯಾಗ್ ಕಂಪೆನಿಯ ಪ್ರಮುಖರು ಹಾಗೂ ಎಂಎಸ್ಇಜೆಡ್ ಅಧಿಕಾರಿಗಳು ಉಪಸ್ಥಿತರಿದ್ದರು.
MP Brijesh Chowta Back To Ooru, Espression of Interest signed between the Germany based ETAG group and the Mangalore SEZ. The Indian subsidiary of Germany based ETAG Group, ETAG Energietechnik led by Chairman Shri Prakash Pereira has expressed interest in coming “Back To Ooru” in light of the various strategic advantages that Mangalore offers.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm