ಬ್ರೇಕಿಂಗ್ ನ್ಯೂಸ್
30-01-25 10:42 pm Mangalore Correspondent ಕರಾವಳಿ
ಬಂಟ್ವಾಳ, ಜ.30: ಕಲ್ಲಡ್ಕ ಮೇಲ್ಸೇತುವೆ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಕಂಪ್ಲೀಟ್ ಆಗಲಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಹಿಸಿಕೊಂಡ ಕೆಎನ್ ಆರ್ ಸಿ ಕಂಪನಿ ನೀಡಿರುವುದಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜೊತೆ ಬಿ.ಸಿ.ರೋಡಿನಿಂದ ಉಪ್ಪಿನಂಗಡಿ ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಕಾಂಚನದಲ್ಲಿರುವ ಕೆ.ಎನ್.ಆರ್.ಸಿ. ಕಂಪೆನಿಯ ಪ್ಲಾಂಟ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಬಿಸಿ ರೋಡಿನಿಂದ ಪೆರಿಯಶಾಂತಿ ವರೆಗೆ ಸುಮಾರು 45 ಕಿ.ಮೀ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಮಳೆಗಾಲದ ಮೊದಲು ಮುಗಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಭರವಸೆಯನ್ನು ಕಂಪೆನಿ ನೀಡಿದೆ. ಬ್ಲಾಸ್ಟಿಂಗ್ ಸಮಸ್ಯೆ ಇರುವ ಕಡೆ ಮಾತ್ರ ಕಾಮಗಾರಿ ತುಸು ವಿಳಂಬವಾಗಬಹುದು ಬಿಟ್ಟರೆ ಉಳಿದ ಎಲ್ಲಾ ಕಡೆ ಸಂಚಾರಕ್ಕೆ ಮುಕ್ತ ಮಾಡುವುದಾಗಿ ಅವರು ತಿಳಿಸಿದರು.
ಮೆಲ್ಕಾರ್ ಸಮೀಪದ ನರಹರಿ ಹಾಗೂ ನೀರಕಟ್ಟೆ ಎಂಬಲ್ಲಿ ತಡೆಗೋಡೆ ಹಾಗೂ ಬ್ಲಾಸ್ಟಿಂಗ್ ಸಮಸ್ಯೆ ಇದ್ದು ರಸ್ತೆ ಕಾಮಗಾರಿಯನ್ನು ಪೂರ್ತಿಗೊಳಿಸುವಲ್ಲಿ ತುಸು ವಿಳಂಬವಾಗಬಹುದು. ಅದು ಬಿಟ್ಟರೆ ಉಳಿದಂತೆ ಎಲ್ಲಿಯೂ ರಸ್ತೆ ನಿರ್ಮಾಣಕ್ಕೆ ಅಡೆತಡೆಗಳಿಲ್ಲ. ಹೆದ್ದಾರಿ ನಿರ್ಮಾಣದ ವೇಳೆ ಕೆಲವು ಕಡೆಗಳಲ್ಲಿ ರಸ್ತೆ ಸಮಸ್ಯೆ, ಮಳೆಗಾಲದಲ್ಲಿ ಜಮೀನಿಗೆ ನೀರು ನುಗ್ಗುವ ಸಮಸ್ಯೆ, ಕ್ರಾಸಿಂಗ್ ಹೀಗೆ ಇನ್ನಿತರ ಸಣ್ಣಪುಟ್ಟ ವ್ಯತ್ಯಾಸಗಳು ಇವೆ. ಈ ಬಗ್ಗೆ ಅಧಿಕಾರಿಗಳಲ್ಲಿ ಮಾಹಿತಿ ಪಡೆದು ಮುಂದಿನ ಕ್ರಮದ ಬಗ್ಗೆ ಚರ್ಚಿಸುವುದಾಗಿ ಅವರು ತಿಳಿಸಿದರು.
ಆರಂಭದಲ್ಲಿ ಬಿಸಿರೋಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖರು ವೃತ್ತದ ಸುತ್ತ ಜಾಗವನ್ನು ಅಗಲೀಕರಣಗೊಳಿಸಿ, ವೃತ್ತದ ಸೌಂದರ್ಯವನ್ನು ಇನ್ನಷ್ಟು ಹೆಚ್ಚು ಮಾಡುವಂತೆ ಮನವಿ ಮಾಡಿದರು. ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ಪೇರಮೊಗ್ರು, ಉಪ್ಪಿನಂಗಡಿ, ಸುಬ್ರಹ್ಮಣ್ಯ ಕ್ರಾಸ್ ಕಡೆಗಳಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಹಾಗೂ ಕಲ್ಲಡ್ಕದಲ್ಲಿ ಅಂತಿಮ ಹಂತದಲ್ಲಿರುವ ಫ್ಲೈ ಓವರ್ ಕಾಮಗಾರಿ ವೀಕ್ಷಿಸಿದರು.
Dakshina Kannada Member of Parliament Capt. Brijesh Chowta said on Thursday that he is hopeful that 90% of National Highway 75 widening work between B.C. Road and Periyashanti is likely to be over by this May end.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm