ಬ್ರೇಕಿಂಗ್ ನ್ಯೂಸ್
12-02-25 09:18 pm Mangalore Correspondent ಕರಾವಳಿ
ಮಂಗಳೂರು, ಫೆ.12 : ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರ್ಕಾರ ಶೀಘ್ರ ’ರಾಜ್ಯ ಇಎಸ್ಐ ಸೊಸೈಟಿ’ಯನ್ನು ರಚಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ ಸಂಸದರು, "ರಾಜ್ಯ ಇಎಸ್ಐ ಸೊಸೈಟಿ ರಚನೆಯಿಂದ ಇಎಸ್ಐ ಆಸ್ಪತ್ರೆಗಳಲ್ಲಿ ಮೂಲಸೌಕರ್ಯದ ತ್ವರಿತ ಸುಧಾರಣೆ, ವೈದ್ಯಕೀಯ ಉಪಕರಣಗಳ ಖರೀದಿ, ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅನುಕೂಲವಾಗುವುದು ಮಾತ್ರವಲ್ಲದೇ ಅನುಭವಿ ತಜ್ಞ ವೈದ್ಯರು ಮತ್ತು ನುರಿತ ಸಿಬ್ಬಂದಿ ನೇಮಕ ಮಾಡಲು ಇದು ಸಹಾಯಕವಾಗಲಿದೆ" ಎಂದು ತಿಳಿಸಿದ್ದಾರೆ.
ಕ್ಯಾ. ಚೌಟ ಅವರು ಮಂಗಳೂರು ಇಎಸ್ಐ ಆಸ್ಪತ್ರೆಯ ಸಮಸ್ಯೆಗಳ ಕುರಿತು ಚರ್ಚಿಸಲು ಇತ್ತೀಚೆಗೆ ದೆಹಲಿಯಲ್ಲಿ ನೌಕರರ ರಾಜ್ಯ ವಿಮಾ ನಿಗಮದ (ESIC) ಮಹಾನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ವೇಳೆ ಇಎಸ್ಐಸಿಗೆ ಸಂಬಂಧಿಸಿದ ರಾಜ್ಯದ ಎಲ್ಲಾ ಕಾರ್ಯ ಚಟುವಟಿಕೆ ಸುಗಮಗೊಳಿಸಲು ಮತ್ತು ಕೇಂದ್ರದಿಂದ ಅನುದಾನ ಬಿಡುಗಡೆಯನ್ನು ಸಮರ್ಥವಾಗಿ ನಿರ್ವಹಿಸಲು ರಾಜ್ಯ ಸರ್ಕಾರವು ಪ್ರತ್ಯೇಕ ಸೊಸೈಟಿ ರಚಿಸಬೇಕು. ಅದು ರಾಜ್ಯದಲ್ಲಿನ ಎಲ್ಲಾ ಇಎಸ್ಐಸಿಗೆ ಸಂಬಂಧಿಸಿದ ವಿಷಯಗಳಿಗೆ ಮತ್ತು ಕೇಂದ್ರದ ಫಂಡ್ ವಿತರಣೆಗೆ ಆಡಳಿತ ಮಂಡಳಿಯಾಗಿದ್ದು, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಕಾರ್ಯದರ್ಶಿಗಳು ಈ ಸೊಸೈಟಿಯ ಮುಖ್ಯಸ್ಥರಾಗಿರುತ್ತಾರೆ ಎಂದು ಡಿಜಿ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಶೀಘ್ರವಾಗಿ "ರಾಜ್ಯ ಇಎಸ್ಐ ಸೊಸೈಟಿ " ರಚನೆ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಸಂಸದರು ಕಾರ್ಮಿಕ ಸಚಿವರನ್ನು ಒತ್ತಾಯಿಸಿದ್ದಾರೆ.
"ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಕಾರ್ಯದರ್ಶಿಗಳನ್ನು ಸಂಪರ್ಕಿಸಿ 'ರಾಜ್ಯ ಇಎಸ್ಐ ಸೊಸೈಟಿ ರಚನೆ' ಕುರಿತು ಈಗಾಗಲೇ ಮನವಿ ಸಲ್ಲಿಸಿದೆ. ಈ ಸೊಸೈಟಿ ರಚನೆಯಿಂದ ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲ ಕಲ್ಪಿಸಲು ಹಾಗೂ ಇಎಸ್ಐ ಆಸ್ಪತ್ರೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಅಭಿವೃದ್ದಿಗೆ ದೊಡ್ಡ ರೀತಿಯಲ್ಲಿ ಸಹಕಾರಿಯಾಗಲಿದೆ. ಆದ್ದರಿಂದ, ಸೊಸೈಟಿ ರಚನೆ ಕುರಿತು ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಲು ಮತ್ತು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಇಎಸ್ಐ ಸೊಸೈಟಿ ರಚಿಸಲು ಮುಖ್ಯ ಕಾರ್ಯದರ್ಶಿ / ಕಾರ್ಮಿಕ ಕಾರ್ಯದರ್ಶಿಗಳಿಗೆ ತಾವು ನಿರ್ದೇಶನ ನೀಡಬೇಕು ಎಂದು ಪ್ರತ್ರದಲ್ಲಿ ಕ್ಯಾ. ಚೌಟ ಆಗ್ರಹಿಸಿದ್ದಾರೆ.
ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದ ಸಂಸದ ಚೌಟ
ಜನವರಿ ಮೊದಲ ವಾರದಲ್ಲಿ ಸಂಸದ ಕ್ಯಾ.ಚೌಟ ಮಂಗಳೂರಿನ ಇಎಸ್ಐ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದಾಗ ಕಾರ್ಮಿಕರಿಗೆ ವೈದ್ಯಕೀಯ ಸೇವೆಗಳು ಸಮರ್ಪಕವಾಗಿ ಸಿಗದಿರುವ ವಿಚಾರ ಹಾಗೂ ಅಲ್ಲಿನ ಅವ್ಯವಸ್ಥೆ ಬೆಳಕಿಗೆ ಬಂದಿತ್ತು. 100 ಹಾಸಿಗೆಗಳ ಸಾಮರ್ಥ್ಯವಿರುವ ಈ ಆಸ್ಪತ್ರೆಯಲ್ಲಿ, 70 ಬೆಡ್ ಮಾತ್ರ ಉಪಯೋಗಕ್ಕೆ ಯೋಗ್ಯವಾಗಿತ್ತು. ಇಲ್ಲಿ 28 ವೈದ್ಯರು ಸೇವೆಗೆ ಅಗತ್ಯವಿದ್ದು, 5 ವೈದ್ಯರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರಮಿಕ ವರ್ಗಕ್ಕೆ ಕೇವಲ ಜನರಲ್ ಟ್ರೀಟ್ ಮೆಂಟ್ ದೊರಕುತ್ತಿದ್ದು ತೀರಾ ಅಗತ್ಯವಾಗಿರುವ ಪ್ರಸೂತಿ, ಮಕ್ಕಳ, ಆರ್ಥೋ ಇತ್ಯಾದಿ ತಜ್ಞ ವೈದ್ಯರ ಹಾಗೂ ನುರಿತ ಸಿಬ್ಬಂದಿ ವರ್ಗದ ಕೊರತೆ ಕಂಡುಬಂದ ಹಿನ್ನಲೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಇತ್ತೀಚೆಗೆ ದೆಹಲಿಯಲ್ಲಿ ESIC ಡಿಜಿ ಅವರನ್ನು ಸಂಸದರು ಭೇಟಿಯಾಗಿ ಸಮಸ್ಯೆ ಗಮನಕ್ಕೆ ತಂದಿದ್ದರು.
Dakshina Kannada Member of Parliament Capt. Brijesh Chowta on Wednesday, February 12, urged Karnataka Labour Department to forthwith establish Employees State Insurance (ESI) Society for the smooth running of ESI hospitals in the State, including the one in Mangaluru.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm