ಬ್ರೇಕಿಂಗ್ ನ್ಯೂಸ್
16-02-25 05:02 pm Mangalore Correspondent ಕರಾವಳಿ
ಮಂಗಳೂರು, ಫೆ.16: ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ನಿರ್ದಿಗಂತ ತಂಡವು ನಾಟಕೋತ್ಸವ ನಡೆಸುತ್ತಿದ್ದು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ‘ಸೌಹಾರ್ದದ ಬಳಿ ; ನಮ್ಮ ಕರಾವಳಿ’ ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್ 3ರವರೆಗೆ ನಾಟಕೋತ್ಸವ ನಡೆಯಲಿದೆ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ತುಳು, ಕೊಂಕಣಿ ಸೇರಿದಂತೆ ರಂಗಭೂಮಿ ನಿರ್ದೇಶಕರಿಂದ ರಚನೆಗೊಂಡಿರುವ 8 ನಾಟಕಗಳ ಪ್ರದರ್ಶನ ಇರಲಿದೆ. ಜೊತೆಗೆ, ವಿವಿಧ ರೀತಿಯ ಕಾರ್ಯಾಗಾರ, ವಿಚಾರಗೋಷ್ಠಿ, ಬೀದಿನಾಟಕಗಳನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ. ನಾಟಕೋತ್ಸವವನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಉದ್ಘಾಟಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಶಯ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ನಾಟಕೋತ್ಸವದಲ್ಲಿ ಬಿಜಾಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ ತಂಡ ಪ್ರಸ್ತುತ ಪಡಿಸಲಿರುವ ‘ಫಾರ್ ಎ ಬೈಟ್ ಆಫ್ ಫುಡ್’, ಮಂಗಳೂರು ಯಕ್ಷಮಿತ್ರರು ತಂಡದಿಂದ ‘ಕೋಟಿ ಚೆನ್ನಯ’ ಯಕ್ಷಗಾನ, ಧಾರವಾಡದ ಆಟಮಾಟ ತಂಡ ಹಾಗೂ ಮಹದೇವ ಹಡಪದ ನಿರ್ದೇಶನದ ‘ಗುಡಿಯ ನೋಡಿರಣ್ಣ’, ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡದಿಂದ ‘ಹ್ಯಾಂಗಾನ್’ ಕೊಂಕಣಿ ನಾಟಕ, ಕೇರಳದ ಲಿಟಲ್ ಅರ್ತ್ ಸ್ಕೂಲ್ ಆಫ್ ಥಿಯೇಟರ್ ತಂಡದಿಂದ ‘ಕುಹೂ: ಆಂತಾಲಜಿ ಆನ್ ದ ರೈಲ್ಸ್’, ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’, ಹಾಗೂ ‘ತಿಂಡಿಗೆ ಬಂದ ತುಂಡೇರಾಯ’ ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ಪ್ರಕಾಶರಾಜ್ ವಿವರಿಸಿದ್ದಾರೆ.
ಇದೇ ವೇಳೆ, ಡಾ. ಗಣನಾಥ ಎಕ್ಕಾರು ಅವರು ‘ಬದಲಾಗುತ್ತಿರುವ ಯಕ್ಷಗಾನದ ಸ್ವರೂಪ’ ಎಂಬ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜು ತಂಡದಿಂದ ಕಾಲೇಜು ಬ್ಯಾಂಡ್ ಜ್ಯಾಮಿಂಗ್ ನಡೆಯಲಿದೆ. ಡಾ. ಮೋಹನ್ ಕುಂಟಾರ್ ಅವರು ‘ಕರಾವಳಿಯ ಭಾಷಾ ಸಂಬಂಧದ ಕೊಡುಕೊಳ್ವಿಕೆಯ ಸ್ವರೂಪ’ ವಿಷಯದಲ್ಲಿ ಮಾತನಾಡಲಿದ್ದಾರೆ. ಶಾರದಾ ಜಿ. ಬಂಗೇರ ಅವರು ಪಾಡ್ದನ ಹಾಡಲಿದ್ದು, ಐರಿನ್ ರೆಬಲ್ಲೋ ಮತ್ತು ತಂಡದಿಂದ ವೊವಿಯೊ ಕೊಂಕಣಿ ಹಾಡು ಹಾಗೂ ಸೇಸು ಗೌಡ ಕಲಾ ಟ್ರಸ್ಟ್ನಿಂದ ಕುಡುಬಿ ಹಾಡುಗಳು ಪ್ರಸ್ತುತಗೊಳ್ಳಲಿವೆ. ವೆಂಕಟರಮಣ ಐತಾಳ್ರವರು ‘ಸ್ಥಳೀಯ ಚರಿತ್ರೆಗಳು ಮತ್ತು ಕುಸಿಯುತ್ತಿರುವ ಬಹುತ್ವದ ನೆಲೆ’ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ, ಕರಗ, ಡೋಲು, ಕಾವ್ಯ ವಾಚನ ಸೇರಿದಂತೆ ಹಲವಾರು ರೀತಿಯ ಕಾರ್ಯಕ್ರಮಗಳು ನಡೆಯಲಿವೆ.
“ನಾಟಕೋತ್ಸವ ಸಮಾರೋಪವು ಮಾರ್ಚ್ 3ರ ಸಂಜೆ ನಡೆಯಲಿದ್ದು ಕಾರ್ಯಕ್ರಮದಲ್ಲಿ ಮಲಯಾಳಂ ನಟಿ ಪಾರ್ವತಿ ತಿರುವೊತ್ತು ಭಾವಹಿಸಲಿದ್ದಾರೆ. ಅಂದು, ನಿರ್ದಿಗಂತ ತಂಡದಿಂದ ಅಮಿತ್ ರೆಡ್ಡಿ ನಿರ್ದೇಶನದ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನಗೊಳ್ಳಲಿದೆ.
Nirdiganta, an incubation centre for theatre and arts established by actor Prakash Raj in K. Shetihalli, Srirangapatna, will host the ‘Nirdiganta Utsava’ in Mangaluru from February 28 to March 3.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm