ಬ್ರೇಕಿಂಗ್ ನ್ಯೂಸ್
04-03-25 02:07 am Udupi Correspondent ಕರಾವಳಿ
ಉಡುಪಿ, ಮಾ 04: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕಾಪು ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿರುವ ಮಾರಿಯಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಅವರಿಗೆ ಶಾಲು ಹೊದಿಸಿ ಸ್ವಾಗತಿಸಲಾಯಿತು.
ದೇವರ ದರ್ಶನದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಕಂಗನಾ ಭಾಗವಹಿಸಿದರು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದರು.




ದಕ್ಷಿಣಕನ್ನಡ ಸಂಸದ ಬೃಜೇಶ್ ಚೌಟ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ದಾನಿ ಬಂಜಾರ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.
ಇತ್ತೀಚೆಗೆ ಕಂಗನಾ ರಣಾವತ್ ಅವರ ಸುದೀರ್ಘ ಮಾನನಷ್ಟ ಮೊಕದ್ದಮೆಯೊಂದು ರಾಜೀ ಪಂಚಾಯಿತಿ ಮೂಲಕ ಕೊನೆಗೊಂಡಿತ್ತು. ಇದರ ಬೆನ್ನಲ್ಲೇ ದೇವಸ್ಥಾನ ದರ್ಶನದಲ್ಲಿ ಕಂಗನಾ ಬ್ಯೂಸಿಯಾಗಿದ್ದಾರೆ.
ಮಾರಿಯಮ್ಮ ಕ್ಷೇತ್ರಕ್ಕೆ ಸೂರ್ಯಕುಮಾರ್ ಯಾದವ್ ಭೇಟಿ:
ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಭಾನುವಾರ ಕಾಪು ಶ್ರೀ ಮಾರಿಯಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಕಾಪು ಗದ್ದುಗೆ ಪ್ರತಿಷ್ಠೆಯ ಸಂದರ್ಭದಲ್ಲಿ ಪತ್ನಿ ದೇವಿಶಾ ಶೆಟ್ಟಿ ಜೊತೆ ಆಗಮಿಸಿದ್ದರು. ಇಲ್ಲಿನ ಬೃಹತ್ ಘಂಟೆಯನ್ನು ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿದ್ದರು.
ದೇವಸ್ಥಾನದ ವಿನ್ಯಾಸವನ್ನು ನೋಡಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆಯೂ ಕ್ಷೇತ್ರಕ್ಕೆ ಬಂದು ದೇಗುಲಕ್ಕೆ ಕಂಬವನ್ನು ಸೇವಾ ರೂಪದಲ್ಲಿ ಕೊಟ್ಟಿದ್ದರು. ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಕರಾವಳಿ ಮೂಲದವರು. ನಿರ್ಮಾಣ ಹಂತದಲ್ಲಿದ್ದ ಕಾಪು ಮಾರಿಯಮ್ಮನ ಗುಡಿಯನ್ನು ಕಂಡು ಅಚ್ಚರಿ ವ್ಯಕ್ತಪಡಿಸಿದ್ದ ಸೂರ್ಯ ಕುಮಾರ್, ಬ್ರಹ್ಮಕಲಶೋತ್ಸವದ ವೇಳೆ ದೇಗುಲಕ್ಕೆ ಬರುವುದಾಗಿ ಹೇಳಿದ್ದರು. ನಂತರ ಸ್ವಾಗತ ಸಮಿತಿಯ ವತಿಯಿಂದ ಸೂರ್ಯ ಕುಮಾರ್ ಯಾದವ್ ದಂಪತಿಗೆ ಸನ್ಮಾನ ಮಾಡಲಾಯಿತು.
Member of Parliament from Mandi, Kangana Ranaut, visited the Mariamma Temple in Kaup, Udupi district. The temple, recently reconstructed at a cost of several crores, has become a prominent spiritual center in the region.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm