ಬ್ರೇಕಿಂಗ್ ನ್ಯೂಸ್
04-03-25 10:58 pm Mangalore Correspondent ಕರಾವಳಿ
ಬಂಟ್ವಾಳ, ಮಾ.4 : ವಿಟ್ಲ ಸಮೀಪದ ಮಾಡತ್ತಡ್ಕ ಎಂಬಲ್ಲಿ ಕಲ್ಲಿನ ಕೋರೆಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು ಆಸುಪಾಸಿನ 15ಕ್ಕು ಮಿಕ್ಕಿ ಮನೆಗಳಿಗೆ ಹಾನಿಯಾಗಿದೆ. ಮಧ್ಯಾಹ್ನದ ವೇಳೆಗೆ ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿದ್ದು, ಪರಿಸರದ ಐದು ಗ್ರಾಮಗಳ ಜನರು ಭಯದಿಂದ ನಲುಗಿ ಹೋಗಿದ್ದಾರೆ.
ಕಲ್ಲಿನ ಕೋರೆಯಲ್ಲಿ ಇರಿಸಲಾಗಿದ್ದ ನೂರಕ್ಕೂ ಮಿಕ್ಕಿದ ಜಿಲೆಟಿನ್ ಕಡ್ಡಿ, 50 ಕ್ಕೂ ಮಿಕ್ಕಿದ ಡಿಟೋನೇಟರ್ ಗಳು ಬಿಸಿಲಿನ ಝಳಕ್ಕೆ ಬೆಂಕಿ ಹತ್ತಿಕೊಂಡು ಬ್ಲಾಸ್ಟ್ ಆಗಿದ್ದು, ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ.
ಬಂಟ್ವಾಳ ತಾಲೂಕಿನ ವಿಡ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿ ಘಟನೆ ಸಂಭವಿಸಿದೆ. ಸುಮಾರು 12 ವರ್ಷಗಳಿಂದ ಎನ್.ಎಸ್ ಕ್ರಶರ್ ಎನ್ನುವ ಸಂಸ್ಥೆ ಕಪ್ಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಲಾಗಿತ್ತು. ಸ್ಪೋಟಗೊಂಡ ಪ್ರದೇಶ ಸಂಪೂರ್ಣ ಛಿದ್ರ ಛಿದ್ರವಾಗಿ ಹೋಗಿದೆ. ಸ್ಟೋಟದ ಘರ್ಷಣೆಗೆ ಸುಮಾರು 20 ಮೀಟರ್ ದೂರದಲ್ಲಿದ್ದ ಮನೆಗಳ ಗೋಡೆಗಳಲ್ಲಿ ಬಿರುಕು ಬಿದ್ದಿದೆ, ಕಿಟಕಿ ಗಾಜುಗಳು ಪುಡಿಯಾಗಿದ್ದು, ಮೇಲ್ಛಾವಣಿ ಕುಸಿದು ಬಿದ್ದಿವೆ. ಸುಮಾರು 12 ಮನೆಗಳಿಗೆ ಹೆಚ್ಚಿನ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಪರಿಸರದ ಸುಮಾರು ಇನ್ನೂರು ಮೀಟರ್ ವ್ಯಾಪ್ತಿಯಲ್ಲಿ ಪ್ರದೇಶದ ಗಿಡ ಮರಗಳ ಎಲೆಗಳು ಚೂರು ಚೂರಾಗಿ ಬಿದ್ದಿರೋದು ಸ್ಪೋಟದ ತೀವ್ರತೆಗೆ ಸಾಕ್ಷಿಯಾಗಿದೆ. ಸ್ಪೋಟದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಪೋಟಕಗಳನ್ನು ಅಕ್ರಮವಾಗಿ, ಅಜಾಗರೂಕತೆಯಿಂದ ದಾಸ್ತಾನಿರಿಸಿದ ಸಂಸ್ಥೆಯ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕ್ರಶರ್ ಗೆ ಸಂಬಂಧಿಸಿದ ಯಂತ್ರೋಪಕರಣಗಳನ್ನೂ ವಶಪಡಿಸಿಕೊಳ್ಳಲು ಪೋಲೀಸರು ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಯತೀಶ್ ಭೇಟಿ ನೀಡಿದ್ದು 50ಕ್ಕು ಹೆಚ್ಚು ಡಿಟೋನೇಟರ್ ಇಟ್ಟಿರುವುದು ಬಿಸಿಲ ಝಳಕ್ಕೆ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.
A sudden explosion at a local quarry in Vitla resulted in significant damage to at least 15 houses in the vicinity. The blast, which occurred earlier today, sent shockwaves through the area, prompting immediate response from local authorities.
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm