ಬ್ರೇಕಿಂಗ್ ನ್ಯೂಸ್
05-03-25 03:05 pm Mangalore Correspondent ಕರಾವಳಿ
ಮಂಗಳೂರು, ಮಾ.5 : “ಶಿವಾಜಿ ಹಿಂದೂ ಧರ್ಮದ ರಕ್ಷಕ, ಆದರೆ ಅನ್ಯಧರ್ಮದ ದ್ವೇಷಿಯಲ್ಲ. ಇತಿಹಾಸವನ್ನು ತಿರುಚಿದವರು ಮಾತ್ರ ಅಪಚಾರ ಮಾಡುತ್ತಿದ್ದಾರೆ. ಶಿವಾಜಿಯನ್ನು ಅರಿತವರು ಅವರಂತಹ ಒಬ್ಬ ಒಳ್ಳೆಯ ಸಾಮ್ರಾಟನನ್ನು ಕೊಂಡಾಡುತ್ತಾರೆ. ಶಿವಾಜಿಯ ಸಂಪೂರ್ಣ ಕಥೆ ತಿಳಿದುಕೊಂಡರೆ ಅವರೆಂತಹ ಅನ್ಯಧರ್ಮ ಸಹಿಷ್ಣು ಎನ್ನುವುದು ತಿಳಿಯುತ್ತದೆ. ಶಿವಾಜಿಯ ಬಗ್ಗೆ ತಿಳಿಯದವರು ನಮ್ಮ ಮುಂದಿನ ಚಾರಿತ್ರಿಕ ನಾಟಕ “ಶಿವಾಜಿ”ಯನ್ನು ನೋಡಬೇಕು. ಅವರ ಶಿವಾಜಿ ಬಗೆಗಿನ ಅಭಿಪ್ರಾಯ ಬದಲಾಗುತ್ತದೆ“ ಎಂದು ಹಿರಿಯ ರಂಗಕರ್ಮಿ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಹೇಳಿದ್ದಾರೆ.
”ಶಿವಾಜಿ ನಾಟಕ ಮಾರ್ಚ್ 6ರಂದು ಗುರುವಾರ ಕಟೀಲು ಕ್ಷೇತ್ರದಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ. ಮಾಚ್೯ 13ರಂದು ಪುರಭವನದಲ್ಲಿ ಪ್ರದರ್ಶನ ಕಾಣಲಿದೆ. ನಾಟಕದ ಟೈಟಲ್ ಹಾಡು ಕನ್ನಡ ಭಾಷೆಯಲ್ಲಿದ್ದರೆ ತುಳುವಿನಲ್ಲಿ ಸಂಭಾಷಣೆ ಇರಲಿದೆ. ಹಿಂದಿ, ಮರಾಠಿ ಭಾಷೆಯ ಡೈಲಾಗ್ ಕೂಡ ನಡುವೆ ಇರಲಿದ್ದು ಆಮೂಲಕ ಭಾಷಾ ಸಾಮರಸ್ಯಕ್ಕೆ ಒತ್ತು ನೀಡಲಾಗಿದೆ. ಕಥೆ ರಚನೆಕಾರ ಶಶಿರಾಜ್ ರಾವ್ ಕಾವೂರು ತುಂಬಾ ಕಷ್ಟಪಟ್ಟು ಕಥೆ ರಚಿಸಿದ್ದಾರೆ. ಒಟ್ಟು ಮೂರು ಹಾಡುಗಳಿದ್ದು ಖ್ಯಾತ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಟೈಟಲ್ ಸಾಂಗ್ ಹೆಸರಾಂತ ಗಾಯಕ ಕೈಲಾಶ್ ಖೇರ್ ಹಾಡಬೇಕಿತ್ತು. ಆದರೆ ಅವರು 25 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರಿಂದ ಕೈಬಿಡಬೇಕಾಯಿತು. ಬೇರೆ ಪ್ರಸಿದ್ಧ ಗಾಯಕರಿಂದ ಹಾಡಿಸಲು ಪ್ರಯತ್ನ ಮುಂದುವರಿದಿದೆ“ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
”ಪ್ರೀತೇಶ್ ಬಳ್ಳಾಲ್ ಬಾಗ್ ಇತ್ತೀಚಿನ 70 ಶೋಗಳಲ್ಲಿ ಶಿವದೂತೆ ಗುಳಿಗೆ ನಾಟಕದಲ್ಲಿ ಗುಳಿಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದು ಶಿವಾಜಿ ಪಾತ್ರದಲ್ಲೂ ಅವರೇ ಮುಖ್ಯ ಪಾತ್ರದಲ್ಲಿ ಇರಲಿದ್ದಾರೆ. ಪ್ರಮೋದ್ ಮರವಂತೆ, ಶಶಿರಾಜ್ ಕಾವೂರು ಸಾಹಿತ್ಯ ಬರೆದಿದ್ದಾರೆ. ಶಿವಾಜಿ ಪಾತ್ರಕ್ಕೆ ನಟ ಪೃಥ್ವಿ ಅಂಬರ್ ಕಂಠದಾನ ಮಾಡಿದ್ದರೆ, ಗುರು ದಾದಾಜಿ ಪಾತ್ರಕ್ಕೆ ನವೀನ್ ಡಿ ಪಡೀಲ್ ಧ್ವನಿ ನೀಡಿದ್ದಾರೆ. ಪಟ್ಲ ಸತೀಶ್ ಶೆಟ್ಟಿ, ಡಾ. ದೇವದಾಸ್ ಕಾಪಿಕಾಡ್ ಹಾಡಿದ್ದು ಹಾಡುಗಳು ಸೊಗಸಾಗಿ ಮೂಡಿಬಂದಿವೆ ಎಂದರು.
ಶಿವಾಜಿಯಂತ ರಾಜ ಬೇರೆ ಇಲ್ಲ!
ಶಿವಾಜಿ ಎಲ್ಲ ಜಾತಿ ಧರ್ಮದ ಜನರನ್ನು ಸಮಾನವಾಗಿ ಕಂಡವರು. ಅವರಿಗೆ ಅವರೇ ಸಾಟಿ. ಶಿವಾಜಿ ಒಬ್ಬ ದರೋಡೆಕೋರ, ಅನ್ಯಧರ್ಮದ ದ್ವೇಷಿ ಎಂದೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಬರೆಯುತ್ತಾರೆ. ಇದು ಖಂಡಿತಾ ಸರಿಯಲ್ಲ. ಶಿವಾಜಿಯ ಬಗ್ಗೆ, ಅವರ ಸಾಮ್ರಾಜ್ಯ ಮತ್ತು ಆಡಳಿತದ ಬಗ್ಗೆ ಪಟ್ಟಾಭಿಷೇಕದ ಬಗ್ಗೆ ನಾಟಕದಲ್ಲಿ ವಾಸ್ತವವನ್ನು ತೆರೆದಿಡುವ ಪ್ರಯತ್ನ ಮಾಡಲಾಗಿದೆ ಎಂದು ಕಥೆ ಬರೆದ ಶಶಿರಾಜ್ ರಾವ್ ಕಾವೂರು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಣಿಕಾಂತ್ ಕದ್ರಿ, ಎ.ಕೆ ವಿಜಯ್, ಪ್ರೀತೇಶ್ ಬಳ್ಳಾಲ್ ಭಾಗ್ ಉಪಸ್ಥಿತರಿದ್ದರು.
Mangalore Director Vijay Kumar Kodialbail Defends Shivajis Legacy, No King Like Him, Distortion Breeds Slander. filmmaker Vijay Kumar Kodialbail passionately defended the legacy of the legendary Maratha king, Shivaji Maharaj, highlighting his role as a protector of Hinduism while emphasizing his tolerance towards other faiths. Speaking at a press conference, Kodialbail remarked, "Shivaji was the defender of Hinduism, but not a hater of paganism. It is only those who distort history who do a disservice to his memory and legacy."
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm