ಬ್ರೇಕಿಂಗ್ ನ್ಯೂಸ್
06-03-25 06:44 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಜೈಲಿನಲ್ಲಿ ಫುಡ್ ಪಾಯ್ಸನ್ ಆಗಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ಕೈದಿಗಳನ್ನು ಬಂಧೀಖಾನೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ವೆನ್ಲಾಕ್ ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಚಿಕಿತ್ಸೆ ಬಗ್ಗೆ ವೈದ್ಯರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ, ಒಟ್ಟು 55 ಮಂದಿ ಕೈದಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಹನ್ನೊಂದು ಮಂದಿ ಗುಣ ಹೊಂದಿದ್ದಾರೆ. ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಜೈಲಿನ ಮಾಹಿತಿ ಪ್ರಕಾರ, ನಿನ್ನೆ ರಾತ್ರಿ ಮತ್ತೆ ಹತ್ತು ಮಂದಿಯನ್ನು ಅಸ್ವಸ್ಥರಾದ ಕಾರಣಕ್ಕೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ಯಂತೆ. ಬುಧವಾರ ಸಂಜೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ವೆನ್ಲಾಕ್ ಆಸ್ಪತ್ರೆಗೆ ಭೇಟಿ ಕೊಟ್ಟ ಸಂದರ್ಭದಲ್ಲಿ 45 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದರು.
37 ನಟೋರಿಯಸ್ ಕ್ರಿಮಿನಲ್
ಅಸ್ವಸ್ಥರಾದ ಕೈದಿಗಳ ಪೈಕಿ ನಟೋರಿಯಸ್ ಕ್ರಿಮಿನಲ್ ಗಳಿದ್ದಾರೆ. ಇತ್ತೀಚೆಗೆ ನಡೆದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ, ಅದಕ್ಕೂ ಹಿಂದೆ ನಡೆದ ಚಡ್ಡಿ ಗ್ಯಾಂಗ್ ಕಳ್ಳರು ಹೀಗೆ ಪ್ರಮುಖ ಪ್ರಕರಣಗಳ ಆರೋಪಿಗಳಿಗೂ ಹೊಟ್ಟೆನೋವು ಶುರುವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇವರನ್ನು ಆಸ್ಪತ್ರೆಯಲ್ಲಿ ಇರಿಸಿಕೊಳ್ಳುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕೆಎಸ್ಸಾರ್ಪಿ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಆಸ್ಪತ್ರೆಯ ಹೊರಭಾಗದಲ್ಲಿ ಎರಡು ಬಸ್ಸಿನಲ್ಲಿ ಪೊಲೀಸರನ್ನು ಕಾವಲು ಹಾಕಲಾಗಿದೆ.
ಮಂಗಳೂರು ಜೈಲಿನಲ್ಲಿ 350 ಮಂದಿ ಕೈದಿಗಳಿದ್ದಾರೆ. ಮಧ್ಯಾಹ್ನ ಊಟದ ಬಳಿಕ ಅಸ್ವಸ್ಥರಾಗಿದ್ದು, ಈ ಪೈಕಿ 50 ಮಂದಿಗಷ್ಟೇ ಅನಾರೋಗ್ಯ ಕಾಡಿದ್ದು ಹೇಗೆ ಎನ್ನುವ ಪ್ರಶ್ನೆ ಇದೆ. ಊಟದಲ್ಲಿ ಸಮಸ್ಯೆ ಆಗಿದ್ದಾ ಅಥವಾ ನೀರಿನಲ್ಲಿ ಸಮಸ್ಯೆ ಆಗಿದ್ಯಾ ಎನ್ನುವ ಪ್ರಶ್ನೆಯೂ ಇದೆ. ಪೊಲೀಸ್ ಕಮಿಷನರ್ ಒಟ್ಟು ಘಟನೆ ಬಗ್ಗೆ ತನಿಖೆಗೆ ಆದೇಶ ಮಾಡಿದ್ದಾಗಿ ತಿಳಿಸಿದ್ದಾರೆ. ಜೈಲಿನ ಅಧಿಕಾರಿಗಳು ಎಲ್ಲಿ ಸಮಸ್ಯೆ ಆಗಿದೆ ಎನ್ನುವ ಬಗ್ಗೆ ತಿಳಿಸಿಲ್ಲ. ಒಂದಷ್ಟು ಮಂದಿ ಅಸ್ವಸ್ಥರಾದ ಸಂದರ್ಭದಲ್ಲಿ ಹತ್ತರಲ್ಲಿ ಹನ್ನೊಂದು ಎಂದು ಇತರರು ಕೂಡ ಜೊತೆಗೆ ತೆರಳಿದ್ದಾರೆಯೇ ಎನ್ನುವ ಸಂಶಯವೂ ಇದೆ. ಹೀಗಾಗಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಅಧಿಕಾರಿ, ಸಿಬಂದಿಗೆ ಅವರನ್ನು ಆಸ್ಪತ್ರೆಯಲ್ಲಿ ಕಾಯುವುದೇ ಸವಾಲಾಗಿಸಿದೆ.
Mangalore jail food poisoning, DGP Malini Krishnamoorthy visits wenlock hospital in Mangalore. Another 11 jail inmates have been admitted to the hospital. As many as 44 inmates of the Mangaluru district prison were admitted to Government Wenlock Hospital, following suspected food poisoning, on Wednesday afternoon.
21-08-25 02:03 pm
HK News Desk
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm