ಬ್ರೇಕಿಂಗ್ ನ್ಯೂಸ್
10-03-25 09:16 pm Mangalore Correspondent ಕರಾವಳಿ
ಮಂಗಳೂರು, ಮಾ.10 : ದೇವರಾಜು ಅರಸು ಸರಕಾರದಲ್ಲಿ ಸಚಿವರಾಗಿದ್ದುದಲ್ಲದೆ, ರಾಜ್ಯದಲ್ಲಿ ಭೂಸುಧಾರಣೆ ಕಾಯ್ದೆ ಸಿದ್ಧಪಡಿಸಿ ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಬಿ.ಸುಬ್ಬಯ್ಯ ಶೆಟ್ಟಿ (91) ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಕ್ರಬೈಲು ಗ್ರಾಮದಲ್ಲಿ 1934ರಲ್ಲಿ ಜನಿಸಿದ್ದ ಸುಬ್ಬಯ್ಯ ಶೆಟ್ಟಿ ಸುರತ್ಕಲ್ ವಿಧಾನಸಭೆ ಕ್ಷೇತ್ರದಲ್ಲಿ 1972ರಿಂದ 1978ರ ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ದೇವರಾಜು ಅರಸು ಸರಕಾರದಲ್ಲಿ ಭೂಸುಧಾರಣಾ ಇಲಾಖೆ ಸಚಿವರಾಗಿ ಕೆಲಸ ಮಾಡಿದ್ದರು. ಅರಸು ಸರಕಾರದಲ್ಲಿ ಭೂಸುಧಾರಣೆ ಕಾಯ್ದೆಯನ್ನು ಸಿದ್ಧಪಡಿಸಿ ಸ್ವತಃ ಅದನ್ನು ಜಾರಿಗೆ ತರುವಲ್ಲಿ ಸುಬ್ಬಯ್ಯ ಶೆಟ್ಟಿ ಶ್ರಮ ಹಾಕಿದ್ದರು.
ಉಳುವವನೇ ಹೊಲದೊಡೆಯ ಎನ್ನುವ ನೀತಿಯಂತೆ, ರೈತರಿಗೆ ಕೃಷಿ ಭೂಮಿಯನ್ನು ನೀಡುವ ಕ್ರಾಂತಿಕಾರಿ ಪರಿಕಲ್ಪನೆಯನ್ನು ಜಾರಿಗೊಳಿಸಲು ಸ್ವತಃ ಭೂಮಾಲೀಕರೂ ಆಗಿದ್ದ ಸುಬ್ಬಯ್ಯ ಶೆಟ್ಟಿ ತಾವೇ ಮೊದಲಾಗಿ ತಮ್ಮ ಭೂಮಿಯನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು. ಬಳಿಕ ರಾಜ್ಯ ಸರಕಾರದಲ್ಲಿ ಮಾಹಿತಿ, ಇಂಧನ ಹಾಗೂ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಬಳಿಕ ಜನತಾ ಪಕ್ಷವನ್ನು ಸೇರಿ ರಾಜಕೀಯ ಜೀವನದಿಂದ ನಿವೃತ್ತರಾಗಿದ್ದರು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಹಾಗೂ ಮದ್ರಾಸ್ ವಿವಿಯಿಂದ ಕಾನೂನು ಪದವಿ ಪಡೆದಿದ್ದರು. ಸುಬ್ಬಯ್ಯ ಶೆಟ್ಟಿಯವರಿಗೆ 2014ರಲ್ಲಿ ರಾಜ್ಯ ಸರಕಾರ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಿತ್ತು. ಶಾಂತವೇರಿ ಗೋಪಾಲ ಗೌಡ, ದರಾ ಬೇಂದ್ರೆ ಪ್ರಶಸ್ತಿಯನ್ನೂ ನೀಡಲಾಗಿತ್ತು. ಅವರ ಪತ್ನಿ ಶಾಲಿನಿ ಶೆಟ್ಟಿ ಇತ್ತೀಚೆಗೆ ನಿಧನರಾಗಿದ್ದರು. ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಮತ್ತು ಜನಾರ್ದನ ಪೂಜಾರಿಯವರು ಬಿ.ಸುಬ್ಬಯ್ಯ ಶೆಟ್ಟಿ ಸಮಕಾಲೀನರಾಗಿ ರಾಜಕೀಯ ಪ್ರವೇಶ ಮಾಡಿದ್ದರು. ಸುಬ್ಬಯ್ಯ ಶೆಟ್ಟಿ ನಿಧನ ಸುದ್ದಿ ತಿಳಿದು ಆಘಾತವಾಯಿತು. 1972ರಲ್ಲಿ ನಾವು ಜೊತೆಯಾಗಿಯೇ ಶಾಸಕರಾಗಿದ್ದೆವು. ದೇವರಾಜು ಅರಸು ಕಾಲದಲ್ಲಿ ಭೂಸುಧಾರಣೆ ಕಾಯ್ದೆ ಸಿದ್ಧಪಡಿಸುವಲ್ಲಿ ಸುಬ್ಬಯ್ಯ ಶೆಟ್ಟರ ಕೊಡುಗೆ ದೊಡ್ಡದಿದೆ. ಆನಂತರ, ಆ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡುವುದರಲ್ಲಿಯೂ ಸುಬ್ಬಯ್ಯ ಶೆಟ್ಟಿ ಶ್ರಮಿಸಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಸಂತಾಪ ಪತ್ರದಲ್ಲಿ ಸ್ಮರಿಸಿದ್ದಾರೆ. ಸುಬ್ಬಯ್ಯ ಶೆಟ್ಟಿ ನಿಧನಕ್ಕೆ ಕಾಂಗ್ರೆಸಿನ ಹಿರಿಯ ನಾಯಕರು ಕಂಬನಿ ಮಿಡಿದಿದ್ದಾರೆ.
Former minister B Subbaiah Shetty (91), a resident of Bakrabailu in Bantwal taluk, passed away at his residence in Bengaluru on March 10. Shetty served as the MLA of Suratkal in two terms, 1972 and 1978, and was a cabinet minister under chief minister Devaraj Urs, holding portfolios of land reforms and education.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm