ಬ್ರೇಕಿಂಗ್ ನ್ಯೂಸ್
18-12-20 10:56 am Mangalore Correspondent ಕರಾವಳಿ
ಮಂಗಳೂರು, ಡಿ.18 : ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಸರಕಾರದ ಕೊರೊನಾ ನಿಯಮ ಉಲ್ಲಂಘಿಸಿ ಸಂತೆ ವ್ಯಾಪಾರ ನಡೆಸಿದ್ದನ್ನು ವಿರೋಧಿಸಿ ಸುರತ್ಕಲ್ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬುಧವಾರ ಶಿಬರೂರು ಕೊಡಮಣಿಂತ್ತಾಯ ವರ್ಷಾವಧಿ ಉತ್ಸವ ಆರಂಭವಾಗಿದ್ದು, ಸಂತೆ ಇನ್ನಿತರ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆದರೆ, ರಾತ್ರಿ ಸುಮಾರು 8.30 ರ ವೇಳೆಗೆ ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೆಲವರು ಸಂತೆ ವ್ಯಾಪಾರ ಆರಂಭಿಸಿದ್ದು ಏಕಾಏಕಿ ಅಲ್ಲಿಗೆ ಆಗಮಿಸಿದ ಪೊಲೀಸರು ವ್ಯಾಪಾರಿಗಳ ಮೇಲೆ ಲಾಠಿ ಬೀಸಿದ್ದಾರೆ. ಈ ಸಂದರ್ಭ ಸಂತೆ ವ್ಯಾಪಾರಿಗಳು ಎದ್ದು ಬಿದ್ದು ಓಡಿದ್ದು, ಕೆಲವರಿಗೆ ಲಾಟಿ ಏಟು ಬಿದ್ದು ಗಾಯಗಳಾಗಿವೆ.

ದೈವಸ್ಥಾನದ ಎರಡು ಬದಿಯಲ್ಲಿಯೂ ಕೊರೊನಾ ನಿಯಮ ಉಲ್ಲಂಘಿಸಿ ಅನಧಿಕೃತ ಸಂತೆ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಬೆಳಗಿನಿಂದಲೂ ಶಿಬರೂರು ದೈವಸ್ಥಾನಕ್ಕೆ ಬರುವ ರಿಕ್ಷಾ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದು, ಕಿನ್ನಿಗೋಳಿ ಬಳಿ ಅನೇಕ ರಿಕ್ಷಾ ಚಾಲಕರಿಗೆ ದಂಡ ವಿಧಿಸಲಾಗಿದೆ.
ಶಿಬರೂರು ದೈವಸ್ಥಾನದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ಭಕ್ತಾದಿಗಳು ಸೇರಿದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ. ಕೇವಲ ಸಂತೆ ವ್ಯಾಪಾರಸ್ಥರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ನಡೆಗೆ ಸಂತೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm