ಬ್ರೇಕಿಂಗ್ ನ್ಯೂಸ್
14-03-25 10:35 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಕೇರಳ – ಕರ್ನಾಟಕದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿರುವ ಐದು ಮಂದಿ ಕ್ರಿಮಿನಲ್ ಗಳನ್ನು ಪೊಲೀಸರು ಬಂಧಿಸಿದ್ದು ಜಿಲ್ಲೆಯಲ್ಲಿ ಆಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದಕ್ಕಾಗಿ ಮಂಗಳೂರು ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದು, ಇದೇ ವೇಳೆ ಆರೋಪಿಗಳ ಪಿಎಫ್ಐ ನಂಟಿನ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
ಆರೋಪಿಗಳಿಂದ ಪಿಸ್ತೂಲ್ ಗಳನ್ನು ವಶಪಡಿಸಿರುವುದಲ್ಲದೆ, ಪಿಎಫ್ಐನಲ್ಲಿ ಗುರುತಿಸಿಕೊಂಡಿದ್ದವರಿಗೆ ಅದನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ರೀತಿಯ ಬೆಳವಣಿಗೆ ದೇಶದ ಭದ್ರತೆಗೆ ಸವಾಲಾಗಿದ್ದು, ಯಾಕಾಗಿ ಶಸ್ತ್ರಾಸ್ತ್ರ ಶೇಖರಣೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹಿಂದು ನಾಯಕರನ್ನು, ಹಿಂದುಗಳನ್ನು ಗುರಿಯಾಗಿಸಿ ಇವರು ದುಷ್ಕೃತ್ಯಕ್ಕೆ ಸಂಚು ಹೆಣೆದಿರುವ ಸಾಧ್ಯತೆಯಿದ್ದು, ಒಟ್ಟು ಪ್ರಕರಣವನ್ನು ರಾಜ್ಯ ಸರಕಾರ ಎನ್ಐಎ ತನಿಖೆಗೆ ಹಸ್ತಾಂತರಿಸಬೇಕು. ಆರೋಪಿಗಳು ದೇಶದ್ರೋಹಿ ಸಂಘಟನೆ ಜೊತೆಗೆ ನಂಟು ಹೊಂದಿರುವುದಲ್ಲದೆ, ಹಿಂದುಗಳನ್ನು ಗುರಿಯಾಗಿಸಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆಂಬ ಬಲವಾದ ಶಂಕೆ ಇದೆ.
ಆರೋಪಿಗಳಿಂದ ಐದು ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆಜಿ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಿಂದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯವಾಗಿರುವುದು ಮತ್ತು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ಎಬ್ಬಿಸಲು ಸಂಚು ನಡೆಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉದ್ದೇಶಿಸಿರುವ ಪೂರ್ವಯೋಜಿತ ದುಷ್ಕೃತ್ಯದ ಸತ್ಯಾಸತ್ಯತೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕು ಎಂದು ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
The Vishwa Hindu Parishad (VHP) has called for a National Investigation Agency (NIA) probe into the pistol case involving leaders of the banned Popular Front of India (PFI) in the coastal region. This appeal comes amid rising concerns about a potential sabotage plot linked to the case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am