Mangalore accident, Kinnigoli, Bike, Vidoe: ಕಿನ್ನಿಗೋಳಿ ಬಳಿ ಭೀಕರ ಅಪಘಾತ ; ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರರಿಬ್ಬರು ದುರ್ಮರಣ 

18-03-25 03:15 pm       Mangalore Correspondent   ಕರಾವಳಿ

ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು  ಸವಾರರಿಬ್ಬರು ದುರಂತ ಸಾವನ್ನಪ್ಪಿದ್ದಾರೆ. 

ಮಂಗಳೂರು, ಮಾ.18 : ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು  ಸವಾರರಿಬ್ಬರು ದುರಂತ ಸಾವನ್ನಪ್ಪಿದ್ದಾರೆ. 

ನಿನ್ನೆ ರಾತ್ರಿ‌ ಘಟನೆ ನಡೆದಿದ್ದು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಮತ್ತು ನವೀನ್ ಹೂಗಾರ (26) ಮೃತ ದುರ್ದೈವಿಗಳು. ಬೈಕಿನಲ್ಲಿ ಅತೀ ವೇಗವಾಗಿ ಬಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. 

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಜ್ಜು ಗುಜ್ಜಾಗಿದೆ. ಬೈಕ್ ಸವಾರ ಆತ್ಮಾನಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ನವೀನ್ ನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನವೀನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಯುವಕರಿಬ್ಬರು ಪದ್ಮನೂರಿನಿಂದ ಕಿನ್ನಿಗೋಳಿಯತ್ತ ತೆರಳುತಿದ್ದಾಗ ಅಪಘಾತ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Severe Accident Near Kinnigoli in mangalore, Biker Collides with Electric Pole, Two Riders Killed on spot.