ಬ್ರೇಕಿಂಗ್ ನ್ಯೂಸ್
05-04-25 01:16 pm Mangaluru Staff ಕರಾವಳಿ
ಮಂಗಳೂರು, ಎ.5: ಮಂಗಳೂರಿನ ಜೈಲು ಆವರಣದಲ್ಲಿ 5ಜಿ ಜಾಮರ್ ಯಂತ್ರ ಅಳವಡಿಸಿ ತೊಂದರೆ ಆಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಜೈಲಿನ ಮುಂದೆ ಪ್ರತಿಭಟನಾ ಸಭೆ ನಡೆಸಿ ಒಳಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜೈಲಿನಲ್ಲಿ ಏಕಾಏಕಿ 5ಜಿ ಜಾಮರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜೈಲು ವಿಭಾಗದ ಡಿಜಿ, ಗೃಹ ಸಚಿವರು, ಪೊಲೀಸ್ ಕಮಿಷನರ್ ಗೆ ದೂರಿತ್ತರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ತೊಂದರೆ ಎದುರಿಸಿದರೂ ಕಾಂಗ್ರೆಸ್ ಸರ್ಕಾರ ಮೌನ ವಹಿಸಿದೆ. ನಮ್ಮ ಸರ್ಕಾರ ಇರುತ್ತಿದ್ದರೆ ಜೈಲಿಗೆ ನುಗ್ಗಿ ಜಾಮರ್ ಕಿತ್ತು ಬಿಸಾಕುತ್ತಿದ್ದೆ ಎಂದು ಹೇಳಿದರು.








ಈಗಲೂ ನಾವು ಜೈಲಿಗೆ ಹೋಗಲು ಸಿದ್ಧ, ಜೈಲಿನಲ್ಲಿ ಹೇಗೂ ಮೊಬೈಲ್ ಸಿಗುತ್ತದೆ, ತೊಂದ್ರೆ ಇಲ್ಲ ಎಂದು ಹೇಳಿದ ಕಾಮತ್, ಜೈಲಿನ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಜಾಮರ್ ಅಗತ್ಯವಿದೆಯೇ? ಇವರು ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಜಾಮರ್ ಹಾಕಿದ್ದಾರೆ. ಮೂಗಿನಲ್ಲಿ ನೆಗಡಿ ಆಗಿದೆಯೆಂದು ಮೂಗು ಕತ್ತರಿಸುತ್ತೀರಾ..? ಇದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದರು.
ಪ್ರತಿಭಟನೆ ಸಭೆಯ ಬಳಿಕ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಜೈಲಿನ ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಮೊದಲೇ ತಯಾರಾಗಿದ್ದ 50ಕ್ಕೂ ಹೆಚ್ಚು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧನ ಮಾಡಿದ್ದಾರೆ.
MLA Vedavyas Kamath led a protest outside Mangalore Jail today over the installation of jammers within the facility, which have been a controversial topic in recent weeks. The situation intensified when several BJP members, rallying behind Kamath's cause, attempted to enter the jail grounds to demand answers from the authorities regarding the jammers. Law enforcement swiftly intervened, resulting in the detention of the protestors amid escalating tensions.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm