ಬ್ರೇಕಿಂಗ್ ನ್ಯೂಸ್
16-04-25 08:22 pm Mangalore Correspondent ಕರಾವಳಿ
ಮಂಗಳೂರು, ಎ.16 : ಎ.18ರಂದು ಅಡ್ಯಾರ್ ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಮಾದರಿಯ ಗೂಡ್ಸ್ ಮತ್ತು ಇತರ ಸಾರಿಗೆ ಬಸ್ ಗಳು ಮಂಗಳೂರು ಪಂಪ್ವೆಲ್ ನಿಂದ ಬಿಸಿ ರೋಡ್ ಕಡೆಗೆ ಹೋಗುವ ಮತ್ತು ಆ ಕಡೆಯಿಂದ ಬರುವ ವಾಹನಗಳು ಸಂಚಾರ ಮಾಡುವಂತಿಲ್ಲ. ತುರ್ತು ಅಗತ್ಯದ ಮತ್ತು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಅಲ್ಲದೆ, ಪಂಪುವೆಲ್ / ನಂತೂರು - ಪಡೀಲ್ – ಕಣ್ಣೂರು – ಅಡ್ಯಾರ್ - ಸಹ್ಯಾದ್ರಿ – ಅರ್ಕುಳ - ಪರಂಗಿಪೇಟೆ – ತುಂಬೆ - ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – ೭೩) ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.
ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿಕೆ
➢ ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ - ಬೋಳಿಯಾರ್ - ಮುಡಿಪು - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಬಿ.ಸಿ. ರೋಡ್ ಪೊಳಲಿ ದ್ವಾರ- ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ - ನೀರುಮಾರ್ಗ - ಬೈತುರ್ಲಿ - - ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.
➢ ವಳಚ್ಚಿಲ್ ಜಂಕ್ಷನ್ -ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು - ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.
➢ ಅಡ್ಯಾರ್ ಕಟ್ಟೆ- ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ - ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಪಂಪ್ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ - ಮುಡಿಪು - ಬೊಳಿಯಾರ್ - ಮೆಲ್ಕಾರ್ ಮೂಲಕ ಸಂಚರಿಸುವುದು.
➢ ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ - ಕುಲಶೇಖರ - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
➢ ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ - ಪಚ್ಚನಾಡಿ - ವಾಮಂಜೂರು - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ - ಕಾವೂರು - ಬಜಪೆ - ಕೈಕಂಬ - ಮೂಡಬಿದ್ರೆ ಮೂಲಕ ಸಂಚರಿಸುವುದು.
➢ ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
➢ ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of the large-scale protest scheduled at Kannur on April 18 against the Central Government’s Waqf Amendment Bill, the joint director of the district industrial centre has issued a traffic diversion order to manage the anticipated congestion along the national highway.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm