ಬ್ರೇಕಿಂಗ್ ನ್ಯೂಸ್
19-04-25 06:19 pm Mangaluru Correspondent ಕರಾವಳಿ
ಮಂಗಳೂರು, ಎ.19: ಅಡ್ಯಾರಿನಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದಾಗ ಕೆಲವು ಯುವಕರು ಸೇರಿ ಉದ್ದೇಶಪೂರ್ವಕ ಹೆದ್ದಾರಿಯನ್ನು ಬಂದ್ ಮಾಡಿಸಿದ್ದರು. ಸ್ಥಳದಲ್ಲಿದ್ದ ಪೊಲೀಸರು ಎಷ್ಟು ಮನವಿ ಮಾಡಿಕೊಂಡರೂ, ಯುವಕರು ಪಟ್ಟು ಸಡಿಲಿಸಿರಲಿಲ್ಲ. ಇದೀಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಮಾಡಿದ ವಿಡಿಯೋ ಆಧರಿಸಿ ಮೂವರು ಆರೋಪಿಗಳನ್ನು ಗುರುತಿಸಿದ್ದು, ಅವರ ಹೆಸರನ್ನು ಎಫ್ಐಆರ್ ನಲ್ಲಿ ನಮೂದಿಸಲಾಗಿದೆ. ಜಲೀಲ್ ಕೃಷ್ಣಾಪುರ, ಫಝಲ್ ವಳಚ್ಚಿಲ್, ಮೊಹಮ್ಮದ್ ಹನೀಫ್ ನೌಫಾಲ್ ಎಂಬವರನ್ನು ಗುರುತಿಸಿದ್ದು, ಇನ್ನಿತರ ಯುವಕರನ್ನು ವಿಡಿಯೋ ಆಧರಿಸಿ ಗುರುತು ಹಚ್ಚಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.




ರಾಷ್ಟ್ರೀಯ ಹೆದ್ದಾರಿ 73ರ ಬದಿಯಲ್ಲೇ ಅಡ್ಯಾರಿನಲ್ಲಿ ವಕ್ಫ್ ವಿರೋಧಿ ಸಮಾವೇಶ ಶುಕ್ರವಾರ ಸಂಜೆ ನಡೆದಿತ್ತು. ಆದರೆ ಸಂಜೆ 4.30ರ ವೇಳೆಗೆ ಏಕಾಏಕಿ ರಸ್ತೆಯ ನಡುವೆ ಬಂದಿದ್ದ ಯುವಕರ ತಂಡವು ಯಾವುದೇ ಕಾರಣಕ್ಕೂ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿತ್ತು. ಆನಂತರ, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿ ಸಿದ್ಧಾರ್ಥ ಗೋಯಲ್ ಬಂದು ಮನವಿ ಮಾಡಿಕೊಂಡರೂ ಅಲ್ಲಿ ನಿಂತಿದ್ದ ಯುವಕರು ಕೇಳಲಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆಗೇ ವಾದಿಸುತ್ತ, ನಾವು ಹೆದ್ದಾರಿ ಬಂದ್ ಮಾಡಿಯೇ ಮಾಡುತ್ತೇವೆ, ನಮಗೆ ಹಕ್ಕಿದೆ ಎಂದು ಹೇಳುತ್ತಿದ್ದರು.
ಇದರಿಂದಾಗಿ ಆಂಬುಲೆನ್ಸ್ ಸಂಚಾರ ಸೇರಿದಂತೆ ತುರ್ತು ಸೇವೆಗಳಿಗೂ ತೊಂದರೆಯಾಗಿತ್ತು. ಪೊಲೀಸರ ಕರ್ತವ್ಯಕ್ಕೂ ಅಡ್ಡಿಯಾಗಿತ್ತು. ಹೈಕೋರ್ಟಿನಿಂದ ಹೆದ್ದಾರಿ ಬಂದ್ ಮಾಡಬಾರದೆಂದು ಸೂಚನೆ ಇದ್ದುದರಿಂದ ಪೊಲೀಸರು ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಶತಪ್ರಯತ್ನ ಮಾಡಿದ್ದರು. ಆದರೆ ಯುವಕರ ದುರ್ವರ್ತನೆಯಿಂದಾಗಿ ಪೊಲೀಸರಿಗೆ ಏನು ಮಾಡುವುದಕ್ಕೂ ಸಾಧ್ಯವಾಗಿರಲಿಲ್ಲ.
ಇದೀಗ ಕಂಕನಾಡಿ ನಗರ ಠಾಣೆಯಲ್ಲಿ ಸೆಕ್ಷನ್ 189(2), 126(2), 270, 324(4) 132, 285, 190 ಬಿಎನ್ಎಸ್ ಪ್ರಕಾರ ಕೇಸು ದಾಖಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ರಸ್ತೆ ತಡೆ ನಡೆಸಿದವರನ್ನು ವಿಡಿಯೋ ಆಧರಿಸಿ ಪತ್ತೆಹಚ್ಚುವ ಕಾರ್ಯ ಮಾಡಲಾಗುತ್ತಿದೆ. ತನಿಖೆ ಮುಂದುವರಿಸಿದ್ದು, ಈ ರೀತಿಯ ದುಷ್ಕೃತ್ಯ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
The Mangalore Police have registered a First Information Report (FIR) against the organizers of the Wafq protest held in Adyar. This action comes in response to allegations that the protestors blocked the national highway, in direct violation of a court order prohibiting such disruptions.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm