ಬ್ರೇಕಿಂಗ್ ನ್ಯೂಸ್
21-04-25 07:08 pm Mangalore Correspondent ಕರಾವಳಿ
ಪುತ್ತೂರು, ಎ.21 : ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಪುತ್ತೂರು ಘಟಕದ ವತಿಯಿಂದ ಅಮರ್ ಜವಾನ್ ಜ್ಯೋತಿ ಬಳಿ ನೂರಾರು ಮಂದಿ ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜಾತಿ ಗಣತಿ ವರದಿಯ ಬಗ್ಗೆ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಜನಿವಾರ ತೆಗೆಸುವ ಕೃತ್ಯ ನಡೆದಿದೆ. ಇದು ಕಾಕತಾಳೀಯ ಅನಿಸುತ್ತಿಲ್ಲ. ಸಣ್ಣ ಸಮಾಜವನ್ನು ಬೆದರಿಸಬಹುದು ಎನ್ನುವ ಲೆಕ್ಕಾಚಾರದಲ್ಲಿ ಸರ್ಕಾರದ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನೆಲ್ಲ ಎದುರಿಸಲು ಬ್ರಾಹ್ಮಣ ಸಮಾಜ ಮತ್ತೆ ಪರಶುರಾಮನಂತೆ ಕೊಡಲಿ ಕೈಗೆತ್ತಿಕೊಳ್ಳಬೇಕಾದೀತು ಎಂದು ಎಚ್ಚರಿಕೆ ನೀಡಿದರು.







ರಾಜ್ಯದ ಗೃಹ ಸಚಿವರು ಘಟನೆ ಬಗ್ಗೆ ತಾತ್ಸಾರದ ಹೇಳಿಕೆ ನೀಡುತ್ತಿದ್ದಾರೆ. ಕ್ಷುಲ್ಲಕ ಅನ್ನುವ ರೀತಿ ಬಿಂಬಿಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದ ಮೇಲಿನ ದೌರ್ಜನ್ಯ ಸಹಿಸಲು ಅಸಾಧ್ಯ. ನಾವು ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಇಡೀ ರಾಜ್ಯದಲ್ಲಿ ಬ್ರಾಹ್ಮಣ ಸಮಾಜವನ್ನು ಜಾಗೃತಿ ಮೂಡಿಸಬೇಕು. ಇದಕ್ಕಾಗಿ ಸಮ್ಮೇಳನ ಮಾಡುತ್ತೇವೆ, ಸಂಖ್ಯೆಯಲ್ಲಿ ಸಣ್ಣ ಸಮಾಜವಾದರೂ ನಮ್ಮವರು ಧಾರ್ಮಿಕ ನಿಷ್ಠೆಯಲ್ಲಿ ಪ್ರಬಲರಿದ್ದಾರೆ ಎಂದು ಅರುಣ್ ಪುತ್ತಿಲ ಹೇಳಿದರು.
ಪ್ರತಿಭಟನೆ ಉದ್ಧೇಶಿಸಿ ಮಾತನಾಡಿದ ಬ್ರಾಹ್ಮಣ ಸಭಾ ಮುಖಂಡ ಮಹೇಶ್ ಕಜೆ, ಈ ಪ್ರಕರಣ ಮುಗಿದು ಹೋಗಿದೆ ಎಂದು ಸರಕಾರ ಹೇಳುತ್ತಿದೆ. ಆದರೆ ಇದು ಬ್ರಾಹ್ಮಣರ ಮೇಲಿನ ದೌರ್ಜನ್ಯದ ಆರಂಭ. ಮುಗಿದು ಹೋಗಿಲ್ಲ. ಎಲ್ಲೆಲ್ಲಿ ಬ್ರಾಹ್ಮಣ, ಗೋವುಗಳ ಮೇಲೆ ದೌರ್ಜನ್ಯ ನಡೆಯುತ್ತೋ ಅಲ್ಲಿ ಸರ್ವನಾಶ ಆಗಲಿದೆ. ನಮಗೆ ಪರಶುರಾಮನೇ ಆದರ್ಶ, ಅಗತ್ಯ ಬಿದ್ದರೆ ಕತ್ತಿ ಹಿಡಿಯಲು ತಯಾರಿದ್ದೇವೆ ಎಂದರು.
In a dramatic turn of events, members of the Brahmin community in Puttur have voiced their grievances in a series of protests, culminating in a warning of potential action reminiscent of the legendary figure Parashurama. Arun Puttila, a prominent leader within the community, made a passionate address during the protests, invoking the spirit of Parashurama, known for his fierce defense of Brahmin rights and his warrior ethos.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm