ಬ್ರೇಕಿಂಗ್ ನ್ಯೂಸ್
27-04-25 05:28 pm Mangalore Correspondent ಕರಾವಳಿ
ಮಂಗಳೂರು, ಎ.27 : ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಕ್ರಮ ತೀವ್ರ ವಿವಾದಕ್ಕೆ ಒಳಗಾಗಿತ್ತು. ಇದೀಗ ಅಂತಹದ್ದೇ ಆದೇಶ ರೈಲ್ವೇ ಇಲಾಖೆಯ ನೇಮಕಾತಿ ಪರೀಕ್ಷೆಗೂ ಕಾಣಿಸಿಕೊಂಡಿದ್ದು ಯಾವುದೇ ಧಾರ್ಮಿಕ ಸಂಕೇತಗಳನ್ನು ಅಭ್ಯರ್ಥಿಗಳು ಹೊಂದಿರಬಾರದು ಎಂದು ಪ್ರವೇಶ ಪತ್ರದಲ್ಲಿ ನಮೂದಿಸಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಇದೇ ಎಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು ಮಂಗಳೂರಿನಲ್ಲಿ ಬೋಂದೆಲ್ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಇದೆ. ಪರೀಕ್ಷೆ ಬರೆಯುವ ಮೊದಲು ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ, ಕಾಲುಂಗುರ, ತಿಲಕ, ಜನಿವಾರ, ಕೈಬಳೆ ಇನ್ನಿತರ ಎಲ್ಲವುಗಳನ್ನೂ ತೆಗೆದಿಟ್ಟು ಪರೀಕ್ಷಾ ಕೊಠಡಿ ಪ್ರವೇಶ ಮಾಡುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



ಈ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ಷೇಪಿಸಿದ್ದು ಈ ರೀತಿಯ ಆದೇಶ ಸರಿಯಲ್ಲ. ಇತ್ತೀಚಿಗೆ CET ಪರೀಕ್ಷೆ ಬರೆಯುವ ಸಂಧರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆಗೆ ದಕ್ಕೆಯಾಗಿದ್ದು, ಇಡೀ ದೇಶದ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣುಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಜನಿವಾರವನ್ನು ಕಿತ್ತು ಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗೆ ನೋವು ತಂದಂತಾಗುತ್ತದೆ. ಹಿಂದೂ ಬಹುಸಂಖ್ಯಾತ ನಮ್ಮ ದೇಶದಲ್ಲಿ ಈ ರೀತಿಯ ಹಿಂದೂ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. ಹಾಗಾಗಿ ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದು ವಿಹಿಂಪ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಹೇಳಿಕೆಯಲ್ಲಿ ತಿಳಿಸಿದ್ದಾರೆ.
A recent directive issued during the Railway Recruitment Board (RRB) examination has sparked controversy, after candidates were reportedly asked to remove religious symbols such as mangalsutra (sacred thread worn by married women), tilak (forehead mark), and janivara (sacred thread worn by Brahmin men) before entering the examination hall.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm