ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm