ಬ್ರೇಕಿಂಗ್ ನ್ಯೂಸ್
02-05-25 12:23 pm Mangalore Correspondent ಕರಾವಳಿ
ಮಂಗಳೂರು, ಮೇ 2 : ಹಿಂದು ಸಂಘಟನೆ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋಮು ದ್ವೇಷದ ದಳ್ಳುರಿ ಎಬ್ಬಿಸಿದೆ. ಹಿಂದು ಸಂಘಟನೆ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು ಇದರ ಬೆನ್ನಲ್ಲೇ ಮಂಗಳೂರು ಕಮಿಷನರೇಟ್ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 6ರ ಬೆಳಗ್ಗೆ ವರೆಗೆ ಸೆಕ್ಷನ್ ಜಾರಿಗೊಳಿಸಲಾಗಿದೆ.
ಇದೇ ವೇಳೆ, ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರತಾಳಕ್ಕೆ ಕರೆ ನೀಡಿದ್ದು ಜಿಲ್ಲೆಯಾದ್ಯಂತ ಬಸ್, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಕೆಲವೇ ಕೆಲವು ಖಾಸಗಿ ವಾಹನಗಳು ಮಾತ್ರ ಸಂಚರಿಸುತ್ತಿವೆ. ಮುಲ್ಕಿಯಲ್ಲಿ ಬೆಳ್ಳಂಬೆಳಗ್ಗೆ ಉಡುಪಿ - ಮಂಗಳೂರು ನಡುವೆ ಸಂಚರಿಸುತ್ತಿದ್ದ ಬಸ್ಸಿಗೆ ಕಲ್ಲು ತೂರಲಾಗಿದೆ. ಅಹಿತಕರ ಘಟನೆ ತಪ್ಪಿಸಲು ಜಿಲ್ಲೆಯ ಎಲ್ಲೆಡೆ ಆಯಕಟ್ಟಿನ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮಂಗಳೂರು ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಜಿಲ್ಲೆಯಾದ್ಯಂತ 12 ಕೆಎಸ್ಸಾರ್ಪಿ ತಂಡಗಳನ್ನು ವಿವಿಧ ಕಡೆ ನಿಯೋಜಿಸಿದ್ದು ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಐದು ಎಸ್ಪಿ ದರ್ಜೆಯ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ಈ ಹಿಂದೆ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಐಜಿಪಿ ದರ್ಜೆಯ ಸುಧೀರ್ ರೆಡ್ಡಿ ಅವರನ್ನು ಕರೆಸಲಾಗಿದ್ದು ಕಾನೂನು ಸುವ್ಯವಸ್ಥೆ ಸರಿದೂಗಿಸಲು ಮಂಗಳೂರು ಪೊಲೀಸ್ ಕಮಿಷನರ್ ಗೆ ಸಲಹೆ ನೀಡಲಿದ್ದಾರೆ.
ಇದೇ ವೇಳೆ, ಸುಹಾಸ್ ಶೆಟ್ಟಿ ಮೃತದೇಹವನ್ನು ಮಂಗಳೂರಿನಿಂದ ಆಂಬುಲೆನ್ಸ್ ನಲ್ಲಿ ಬಂಟ್ವಾಳಕ್ಕೆ ಒಯ್ಯಲಾಗಿದೆ. ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಆತನ ಮನೆಯಿದ್ದು ಬಿಸಿ ರೋಡಿನಿಂದ ಮನೆಯ ವರೆಗೆ ಕಾರ್ಯಕರ್ತರು ಸೇರಿ ಮೆರವಣಿಗೆ ನಡೆಸುವ ಸಾಧ್ಯತೆಯಿದೆ. ಮಂಗಳೂರಿಗೆ ಆಗಮಿಸಿರುವ ಎಡಿಜಿಪಿ ಆರ್. ಹಿತೇಂದ್ರ, ಶಾಂತಿ ಕಾಪಾಡಲು ಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ. ಆರೋಪಿಗಳ ಮಾಹಿತಿ ಸಿಕ್ಕಿದ್ದು ಶೀಘ್ರದಲ್ಲೇ ಬಂಧನ ಮಾಡುತ್ತೇವೆ ಎಂದಿದ್ದಾರೆ.
ಪ್ರತೀಕಾರಕ್ಕೆ ನಡೆದಿತ್ತು ಸಂಚು
ಇದೇ ವೇಳೆ, ಸುಹಾಸ್ ಶೆಟ್ಟಿ ಮೇಲೆ ಪ್ರತೀಕಾರ ತೀರಿಸುವ ಬಗ್ಗೆ ಒಂದು ತಿಂಗಳ ಹಿಂದೆಯೇ ಹಾಕ್ಕೊಂಡಿದ್ದ ಸ್ಟೇಟಸ್ ಮತ್ತು ಇನ್ ಸ್ಟಾ ಗ್ರಾಮ್ ವಿಡಿಯೋ ವೈರಲ್ ಆಗಿದೆ. ಅದರಲ್ಲಿ ಮಾರ್ಚ್ 31 ರಂದು ರಿವೇಂಜ್ ಸೂನ್ ಎಂದು ಬರೆದಿದ್ದು ಸುಹಾಸ್ ಮತ್ತು ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಲಾಗಿದೆ. ಈ ಮಾಹಿತಿ ಸ್ವತಃ ಸುಹಾಸ್ ಶೆಟ್ಟಿ ಮತ್ತು ಬಜ್ಪೆ ಪೊಲೀಸರಿಗೂ ತಿಳಿದಿತ್ತು ಎನ್ನಲಾಗುತ್ತಿದೆ. ದುಷ್ಕರ್ಮಿಗಳು ತನ್ನ ಹಿಂದೆ ಬಿದ್ದಿರುವ ಮಾಹಿತಿ ಅರಿತ ಸುಹಾಸ್ ತನ್ನ ಜೊತೆಗೆ ಐದಾರು ಮಂದಿಯನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದ. ಆದರೆ ನಿನ್ನೆ ರಾತ್ರಿ ಕರಾರುವಾಕ್ ಪ್ಲಾನ್ ಮಾಡಿ, ಸುಹಾಸ್ ತೆರಳುತ್ತಿದ್ದ ಕಾರಿಗೆ ಪಿಕಪ್ ವಾಹನ ಡಿಕ್ಕಿಯಾಗಿಸಿ ಕೊಲೆ ಮಾಡಿದ್ದಾರೆ.
The brutal murder of Suhas Shetty has triggered a wave of communal tension in coastal Karnataka, particularly in Mangaluru and surrounding areas of Dakshina Kannada district. In response, the district administration has imposed prohibitory orders under Section 144, enforced a total shutdown, and banned liquor sales to prevent any further escalation of violence.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm